ಕೊಹ್ಲಿ ದಾಖಲೆ ಮುರಿದ ಸ್ಮಿತ್ ಸಮಕಾಲೀನ ಶ್ರೇಷ್ಠ ಬ್ಯಾಟ್ಸ್‌ಮನ್?

ಬರ್ಮಿಂಗ್‌ಹ್ಯಾಮ್: ಬಾಲ್ ಟ್ಯಾಂಪರಿಂಗ್ ಪ್ರಕರಣದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿ ಕಮ್ ಬ್ಯಾಕ್ ಮಾಡಿರುವ ಆಸ್ಟ್ರೇಲಿಯಾದ , ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲೂ ಭರ್ಜರಿ ಶತಕಗಳನ್ನು ಬಾರಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಫೈಟ್ ಬ್ಯಾಕ್ ಸೆಂಚುರಿ ಬಾರಿಸಿದ (144) ಸ್ಮಿತ್ ಇದೀಗ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಶತಕ ಬಾರಿಸುವ ಮೂಲಕ ಮಹತ್ವದ ಮುನ್ನಡೆ ದಾಖಲಿಸಲು ನೆರವಾಗಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮಾಜಿ ದಿಗ್ಗಜ ಡಾನ್ ಬ್ರಾಡ್ಮನ್ ಬಳಿಕ ಎರಡನೇ ಅತಿ ವೇಗದಲ್ಲಿ 25 ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆಗೆ ಪಾತ್ರವಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ನಾಯಕ ದಾಖಲೆಯನ್ನು ಮುರಿದಿದ್ದಾರೆ. 119ನೇ ಇನ್ನಿಂಗ್ಸ್‌ಗಳಲ್ಲೇ ಸ್ಮಿತ್ 25ನೇ ಶತಕ ಸಾಧನೆ ಮಾಡಿದ್ದಾರೆ. 127 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಅಷ್ಟೇ ಶತಕಗಳನ್ನು ಬಾರಿಸಿದ್ದರು. ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್, ಇದೇ ಸಾಧನೆಗಾಗಿ 130 ಇನ್ನಿಂಗ್ಸ್‌ಗಳನ್ನು ಆಡಿದ್ದರು. ಅಷ್ಟೇ ಯಾಕೆ ಆ್ಯಶಸ್ ಟೆಸ್ಟ್ ಪಂದ್ಯವೊಂದರ ಎರಡು ಇನ್ನಿಂಗ್ಸ್‌ಗಳಲ್ಲೂ ಶತಕ ಬಾರಿಸಿದ ಐದನೇ ಆಸೀಸ್ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೂ ಪಾತ್ರವಾಗಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ 25 ಶತಕಗಳನ್ನು ಸ್ಮಿತ್ ಸರಿಗಟ್ಟಿದ್ದಾರೆ. ಈ ಮೂಲಕ ಕೊಹ್ಲಿಗಿಂತಲೂ ಶ್ರೇಷ್ಠ ಬ್ಯಾಟ್ಸ್‌ಮನ್ ಎಂಬ ಚರ್ಚೆಗೆ ಮತ್ತಷ್ಟು ಬಿಸಿ ಮುಟ್ಟಿಸಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2yAN4Zb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...