ದಿಲ್ಲಿಯ ಫಿರೋಜ್ ಶಾ ಕೋಟ್ಲಾ ಸ್ಟೇಡಿಯಂ ಇನ್ಮುಂದೆ ಅರುಣ್‌ ಜೇಟ್ಲಿ ಸ್ಟೇಡಿಯಂ

ಹೊಸದಿಲ್ಲಿ: ಇತ್ತೀಚೆಗೆ ನಿಧನರಾದ ಹಿರಿಯ ರಾಜಕಾರಣಿ, ಬಿಜೆಪಿ ಚಾಣಾಕ್ಷ, ದಿಲ್ಲಿ ಕ್ರಿಕೆಟ್‌ ಸಂಸ್ಥೆಯನ್ನು ಕಟ್ಟಿ ಬೆಳೆಸುವಲ್ಲಿ ಯಶಸ್ವಿಯಾಗಿದ್ದ ಅರುಣ್‌ ಜೇಟ್ಲಿಗೆ ಗೌರವ ಸಲ್ಲಿಸಲು ಸರಕಾರ ಮುಂದಾಗಿದೆ. ರಾಜಕಾರಣಿಯಾಗಿದ್ದರೂ ಕ್ರಿಕೆಟ್‌ ಪ್ರೇಮಿಯಾಗಿದ್ದ , ದಿಲ್ಲಿ ಕ್ರಿಕೆಟ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕಳೆದ ಶನಿವಾರ ಅರುಣ್‌ ಜೇಟ್ಲಿ ಇಹಲೋಕ ತ್ಯಜಿಸಿದರು. ಈಗ ಅವರ ಸ್ಮರಣಾರ್ಥ ಹೊಸದಿಲ್ಲಿಯ ಜನಪ್ರಿಯ ಫಿರೋಜ್‌ ಶಾ ಮೈದಾನವನ್ನು ಅರುಣ್‌ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗುವುದು ಎಂದು ದಿಲ್ಲಿ ಕ್ರಿಕೆಟ್‌ ಅಸೋಸಿಯೇಷನ್‌ ತಿಳಿಸಿದೆ. ಸ್ಟೇಡಿಯಂ ಹೆಸರು ಬದಲಾವಣೆಯಾದರೂ ಮೈದಾನವನ್ನು ಫಿರೋಜ್‌ ಶಾ ಕೋಟ್ಲಾ ಎಂದೇ ಮುಂದುವರಿಸಲಾಗುವುದು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್‌ 12ರಂದು ಮರು ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಸ್ಟಾಂಡ್‌ವೊಂದಕ್ಕೆ ಹೆಸರು ಇಡಲಾಗುವುದು ಎಂದು ಕ್ರಿಕೆಟ್‌ ಅಸೋಸಿಯೇಷನ್‌ ತಿಳಿಸಿದೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2ZxwT9T

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...