ಆ್ಯಶಸ್ ಸ್ಮರಣೀಯ ಗೆಲುವು; ಪೂಜಾರ ಹಿಂದಿಕ್ಕಿದ ಸ್ಮಿತ್

ಹೊಸದಿಲ್ಲಿ: ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ ಬಾರಿಸಿದ ಶತಕಗಳ ನೆರವಿನಿಂದ ಮೊದಲ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಐಸಿಸಿ ಬಿಡುಗಡೆ ತಾಜಾ ಆಟಗಾರರ ರ‍್ಯಾಂಕಿಂಗ್ ಪಟ್ಟಿಯಲ್ಲೂ ಭಾರತದ ಚೇತೇಶ್ವರ ಪೂಜಾರರನ್ನು ಹಿಂದಿಕ್ಕಿ ಸ್ಮಿತ್ ಮೂರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಒಂದು ವರ್ಷದ ನಿಷೇಧ ಶಿಕ್ಷೆಯ ಬಳಿಕ ಮೊದಲ ಬಾರಿಗೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿರುವ ಸ್ಮಿತ್, ಮೊದಲ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ ಶತಕ ಸಾಧನೆ ಮಾಡಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಸರ್ ಡಾನ್ ಬ್ರಾಡ್ಮನ್ ಬಳಿಕ ಅತಿ ವೇಗದಲ್ಲಿ 25 ಶತಕಗಳನ್ನು ಬಾರಿಸಿದ ಎರಡನೇ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಪಾತ್ರವಾಗಿದ್ದರು. ಈ ಪಟ್ಟಿಯಲ್ಲಿ ಭಾರತದ ಮಾಜಿ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದರು. ಪಟ್ಟಿಯನ್ನು 922 ರೇಟಿಂಗ್ ಅಂಕಗಳೊಂದಿಗೆ ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 903 ಅಂಕಗಳನ್ನು ಹೊಂದಿದ್ದಾರೆ. ಹಾಗೆಯೇ ಮೂರನೇ ಸ್ಥಾನಕ್ಕೆ ಜಿಗಿದಿರುವ ಸ್ಮಿತ್ 903 ಅಂಕಗಳನ್ನು ಪಡೆದಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿರುವ 881 ಅಂಕಗಳನ್ನು ಹೊಂದಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2GRHxlv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...