ಭಜ್ಜಿಗಿಲ್ಲ ಖೇಲ್ ರತ್ನ; ಪಂಜಾಬ್ ಸರಕಾರ ತನಿಖೆಗೆ ಆದೇಶ

ಹೊಸದಿಲ್ಲಿ: ಅರ್ಜಿ ಸಲ್ಲಿಸಲು ವಿಳಂಬವಾಗಿರುವ ಹಿನ್ನಲೆಯಲ್ಲಿ ಈ ಬಾರಿಯ ದೇಶದ ಅತ್ಯುನ್ನತ್ತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯಿಂದ ವಂಚಿತವಾಗಿದ್ದಾರೆ. ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಕೇಂದ್ರ ಕ್ರೀಡಾ ಸಚಿವಾಲಯಕ್ಕೆ ಹರ್ಭಜನ್ ಸಿಂಗ್ ಹೆಸರನ್ನು ಶಿಫಾರಸು ಮಾಡಲು ಸರಕಾರ ನಿರ್ಧರಿಸಿತ್ತು. ಇದರಂತೆ ಮಾರ್ಚ್ ತಿಂಗಳಲ್ಲೇ ಹರ್ಭಜನ್ ಅರ್ಜಿ ಸಲ್ಲಿಸಿದ್ದರು. ಆದರೆ ಕೇಂದ್ರ ಸರಕಾರಕ್ಕೆ ವಿಳಂಬವಾಗಿ ತಲುಪಿದ್ದರಿಂದ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಇದರ ವಿರುದ್ಧ ಭಜ್ಜಿ ಬೇಸರ ತೋಡಿಕೊಂಡಿದ್ದು, ತನಿಖೆ ನಡೆಸುವಂತೆ ಪಂಜಾಬ್ ಕ್ರೀಡಾ ಸಚಿವರನ್ನು ವಿನಂತಿಸಿಕೊಂಡಿದ್ದಾರೆ. ಹರ್ಭಜನ್ ವಿನಂತಿಗೆ ಸ್ಪಂದಿಸಿರುವ ಪಂಜಾಬ್ ಕ್ರೀಡಾ ಸಚಿವರಾದ ರಾಣಾ ಗುರ್ಮಿತ್ ಸಿಂಗ್ ಸೋಧಿ ಈ ಎಲ್ಲ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಯಾವುದೇ ಕ್ರೀಡಾಪಟುವಿಗೆ ಪ್ರಶಸ್ತಿ ಅತಿ ದೊಡ್ಡ ಸ್ಫೂರ್ತಿಯಾಗಿರುತ್ತದೆ. ಆದರೆ ಇಂತಹ ಘಟನೆಗಳು ಕ್ರೀಡಾಪಟುಗಳನ್ನು ನಿರುತ್ಸಾಹಗೊಳಿಸುತ್ತದೆ ಎಂದು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಮೂರನೇ ಅತಿ ಹೆಚ್ಚು ವಿಕೆಟುಗಳನ್ನು ಕಬಳಿಸಿರುವ 39ರ ಹರೆಯದ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2LRypBH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...