ಇಸ್ಲಾಮಾಬಾದ್: ವಿಷಯದಲ್ಲಿ ಈಗಾಗಲೇ ಜಾಗತಿಕ ವೇದಿಕೆಯಲ್ಲಿ ಭಾರಿ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನಕ್ಕೆ ಈಗ ಆಂತರಿಕವಾಗಿಯೂ ಭಾರಿ ಹಿನ್ನಡೆಯಾಗುತ್ತಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಎಲ್ಲರೂ ಬೌನ್ಸರ್‌ಗಳನ್ನು ಹಾಕುತ್ತಿದ್ದಾರೆ. ಜಮ್ಮು ಕಾಶ್ಮೀರ ವಿಷಯದಲ್ಲಿ ಸದಾ ಮೂಗು ತೂರಿಸುತ್ತಿದ್ದ ಪಾಕಿಸ್ತಾನಕ್ಕೆ ಈಗ ಜಾಗತಿಕ ರಾಷ್ಟ್ರ ನಾಯಕರು ಚಾಟಿ ಬೀಸಿದ್ದಾರೆ. ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ, ಪ್ರತಿಪಕ್ಷದ ನಾಯಕರೂ ಆಗಿರುವ ಈಗ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ತಿರುಗೇಟು ನೀಡಿದ್ದಾರೆ. ಜಮ್ಮು ಕಾಶ್ಮೀರ ವಿಷಯದಲ್ಲಿ ಶ್ರೀನಗರವನ್ನು ಬಿಡಿ. ಈಗ ಮುಝಫರಾಬಾದ್ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಈ ಮೊದಲು ನಮ್ಮ ಧೋರಣೆ ಶ್ರೀನಗರವನ್ನು ವಶಪಡಿಸಿಕೊಳ್ಳುವುದು ಆಗಿತ್ತು. ಈಗ ಮುಝಫರಾಬಾದ್ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ. ಜಮ್ಮು ಕಾಶ್ಮೀರ ವಿಷಯವನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಲಘುವಾಗಿ ಪರಿಗಣಿಸಿದ್ದಾರೆ. ಸರಕಾರದ ನೀತಿಗಳೇ ಈ ಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ಬಿಲಾವಲ್ ಭುಟ್ಟೊ ಹೇಳಿದ್ದಾರೆ. ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಮಂತ್ರಿ ನರೇಂದ್ರ ಮೋದಿ ಜಮ್ಮು ಕಾಶ್ಮೀರ ವಿಷಯ ಕುರಿತು ಚರ್ಚೆ ನಡೆಸಿದ ಬೆನ್ನಲ್ಲೇ ಬಿಲಾವಲ್ ಭುಟ್ಟೊ ಈ ರೀತಿಯ ಹೇಳಿಕೆ ನೀಡಿರುವುದು ಪಾಕ್ ಪ್ರಧಾನಿ ಇಮ್ರಾನ್ ಖಾನ್‌ರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
from India & World News in Kannada | VK Polls https://ift.tt/2U5SEgd