ಕಾಶ್ಮೀರದಲ್ಲಿ ಸೇನಾ ಸಮವಸ್ತ್ರದಲ್ಲಿ ಧೋನಿ; ಚಿತ್ರ ವೈರಲ್!

ಹೊಸದಿಲ್ಲಿ: ಕ್ರಿಕೆಟ್‌ಗೆ ಬಿಡುವು ನೀಡಿರುವ ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಪ್ರಾದೇಶಿಕ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‌ನಲ್ಲಿ ಗೌರವಾನ್ವಿತ ಲೆಫ್ಟಿನಂಟ್ ಕರ್ನಲ್ ಹುದ್ದೆಯನ್ನು ಹೊಂದಿರುವ ಮಹಿ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ವರೆಗೆ ಕಾಶ್ಮೀರದಲ್ಲಿ ಸೇವೆ ಸಲ್ಲಿಸಲಿದ್ದಾರೆ. ಇದರಂತೆ 106 ಟಿಎ ಬೆಟಾಲಿಯನ್ (ಪ್ಯಾರಾ) ಜತೆಗೆ ಕಾಶ್ಮೀರಕ್ಕೆ ತೆರಳಿರುವ ಧೋನಿ ಅವರ ಮೊದಲ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ವಿಕ್ಟರ್ ಫೋರ್ಸ್‌ನ ಭಾಗವಾಗಿರುವ ಧೋನಿ ಕಾಶ್ಮೀರದ ದಕ್ಷಿಣ ಭಾಗದಲ್ಲಿ ರೆಜಿಮೆಂಟ್ ಜತೆ ಗಸ್ತು ತಿರುಗುವುದರೊಂದಿಗೆ ಸೇನಾ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ. ಸೇನಾ ಸಮವಸ್ತ್ರ ಧರಿಸಿರುವ ಧೋನಿ ತಮ್ಮ ಜವಾಬ್ದಾರಿಯನ್ನು ಬಹಳಷ್ಟು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ. ಅಲ್ಲದೆ ತಮ್ಮ ಸೇನೆಯಲ್ಲಿರುವ ಯೋಧರಿಗೆ ಆಟೋಗ್ರಾಫ್ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಏತನ್ಮಧ್ಯೆ ಎರಡು ತಿಂಗಳುಗಳ ಬಳಿಕ ಭಾರತ ಕ್ರಿಕೆಟ್ ತಂಡಕ್ಕೆ ಧೋನಿ ಮರಳಲಿದ್ದಾರೆಯೇ ಎಂಬುದು ಕುತೂಹಲವೆನಿಸಿದೆ. ಈ ಮೊದಲು ಏಕದಿನ ವಿಶ್ವಕಪ್ ಬಳಿಕ ಧೋನಿ ನಿವೃತ್ತಿ ಸಲ್ಲಿಸುವ ಬಗ್ಗೆ ವರದಿಗಳು ಬಂದಿದ್ದವು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2KjSHk2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...