ಕುಲಭೂಷಣ್‌ ಜಾಧವ್‌ ಭೇಟಿಗೆ ಅನುಮತಿ ನೀಡಿದ ಪಾಕಿಸ್ತಾನ

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ಮಾಜಿ ನೌಕಾಪಡೆ ಅಧಿಕಾರಿ ಅವರನ್ನು ಭೇಟಿ ಮಾಡಲು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಅನುಮತಿ ನೀಡಿದೆ. ಶುಕ್ರವಾರವೇ ಅನುಮತಿ ನೀಡಲಾಗುವುದು ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಸಂಬಂಧ ಭಾರತೀಯ ರಾಯಭಾರಿ ಕಚೇರಿಗೆ ಮಾಹಿತಿ ಒದಗಿಸಲಾಗಿದೆ. ಭಾರತದ ಪ್ರತಿಕ್ರಿಯೆಯನ್ನು ಎದುರು ನೋಡುತ್ತಿದ್ದೇವೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವಾಲಯ ವಕ್ತಾರ ಮೊಹಮದ್‌ ಫೈಸಲ್‌ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ವಿದೇಶಾಂಗ ವ್ಯವಹಾರ ಸಚಿವಾಲಯ ವಕ್ತಾರ ರವೀಶ್ ಕುಮಾರ್‌, ಜಾಧವ್‌ ಭೇಟಿಗೆ ರಾಜತಾಂತ್ರಿಕ ಅನುಮತಿ ನೀಡುವ ಪ್ರಸ್ತಾವವನ್ನು ಪಾಕಿಸ್ತಾನ ಕಳುಹಿಸಿಕೊಟ್ಟಿದೆ. ಅಂತಾರಾಷ್ಟ್ರೀಯ ನ್ಯಾಯಾಲಯದ ನೀತಿ ನಿಯಮಗಳನ್ನು ಗಮನದಲ್ಲಿಟ್ಟು ನಾವು ಮುಂದಿನ ಕ್ರಮ ಕೈಗೊಂಡು ಪ್ರತಿಕ್ರಿಯೆ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಜಾಧವ್ ಅವರನ್ನು ಭೇಟಿ ಮಾಡಲು ಭಾರತದ ರಾಯಭಾರಿ ಅಧಿಕಾರಿಗಳಿಗೆ ಪಾಕಿಸ್ತಾನ ಅವಕಾಶ ಕಲ್ಪಿಸಲು ಕ್ರಮ ಕೈಗೊಂಡಿದೆ. ಕುಲಭೂಷಣ್‌ ಜಾಧವ್ ಅವರ ಭೇಟಿಗೆ ಭಾರತದ ರಾಯಭಾರಿಗೆ ಅವಕಾಶ ಕಲ್ಪಿಸಲಾಗುವುದು. ಈ ಸಂಬಂಧ ಕೆಲವು ಕಾನೂನು ತಿದ್ದುಪಡಿ ಮಾಡಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವಾಲಯ ಮಾಹಿತಿ ನೀಡಿದೆ. ವಿಯೆನ್ನಾ ಒಪ್ಪಂದವನ್ನು ಪಾಲಿಸುವಂತೆ ಅಂತಾರಾಷ್ಟ್ರೀಯ ನ್ಯಾಯಾಲಯ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಮ ಕೈಗೊಂಡಿದೆ. ಗೂಢಚಾರಿ ಆರೋಪದ ಮೇಲೆ ಜಾಧವ್‌ ಅವರನ್ನು ಪಾಕ್‌ ಬಂಧಿಸಿತ್ತು. ಅಲ್ಲದೇ ಗಲ್ಲು ಶಿಕ್ಷೆ ಕೂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ವಾದ ಪ್ರತಿವಾದ ಆಲಿಸಿದ ಅಂತಾರಾಷ್ಟ್ರೀಯ ನ್ಯಾಯಾಲಯ ಇತ್ತೀಚೆಗೆ ಆದೇಶ ಪ್ರಕಟಿಸಿ, ಮರಣದಂಡನೆ ಶಿಕ್ಷೆ ಆದೇಶವನ್ನು ಪಾಕಿಸ್ತಾನ ಮರುಪರಿಶೀಲಿಸಬೇಕು ಎಂದು ತಿಳಿಸಿತ್ತು. ನೆದರ್‌ಲೆಂಡ್‌ನ ಹೇಗ್‍ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಲಾಗಿತ್ತು. ಹೀಗಾಗಿ ಜಾಧವ್‌ಗೆ ಪಾಕಿಸ್ತಾನ ನೀಡಿರುವ ಮರಣದಂಡನೆ ಶಿಕ್ಷೆಯನ್ನು ಅಮಾನತ್ತಿಲ್ಲಿಡಲಾಗಿದೆ.


from India & World News in Kannada | VK Polls https://ift.tt/2ZmGtNT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...