ಜಮ್ಮು ಕಾಶ್ಮೀರಕ್ಕೆ ರಾಹುಲ್‌, ಪ್ರತಿಪಕ್ಷ ನಾಯಕರು ಶನಿವಾರ ಭೇಟಿ

ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನ 370ನೇ ವಿಧಿ ರದ್ದುಪಡಿಸಿದ ನಂತರ ಕಣಿವೆ ರಾಜ್ಯದಲ್ಲಿ ಸ್ಥಿತಿಗತಿ ಅವಲೋಕಿಸಲು ಕಾಂಗ್ರೆಸ್‌ ನಾಯಕ ಹಾಗೂ ಇತರೆ ನಾಯಕರು ಶನಿವಾರ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ, ಗುಲಾಂ ನಬಿ ಆಜಾದ್‌, ಆನಂದ್ ಶರ್ಮಾ ಅಲ್ಲದೇ ಸಿಪಿಐ, ಸಿಪಿಎಂ, ರಾಷ್ಟ್ರೀಯ ಜನತಾದಳ, ಎನ್‌ಸಿಪಿ ನಾಯಕರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಭಿತ್ತಿ ಪತ್ರದ ಮೂಲಕ ವದಂತಿ ಹಬ್ಬಿಸುತ್ತಿರುವ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಶ್ರೀನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಭಿತ್ತಿ ಪತ್ರ ಯಾವುದೇ ಅಡ್ಡಿಯಾಗದು ಆದರೂ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಅನೇಕ ಕಡೆ ಹೆಚ್ಚಿನ ಭದ್ರತಾ ಪಡೆ ನಿಯೋಜಿಸಲಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಲು ಗಮನ ಹರಿಸಲಾಗಿದೆ ಎಂದು ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ವಾರದ ಆರಂಭದಲ್ಲಿ ಕಾಶ್ಮೀರದ ಹಲವು ಭಾಗದಲ್ಲಿ ವಿಧಿಸಲಾಗಿದ್ದ ನಿಷೇದಾಜ್ಞೆಯ ಹಿಂಪಡೆಯಲಾಗಿತ್ತು.


from India & World News in Kannada | VK Polls https://ift.tt/33P4CPL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...