ಅನರ್ಹ ಶಾಸಕರು ತುಸು ನಿರಾಳ: ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಸಮ್ಮತಿ

ಹೊಸದಿಲ್ಲಿ: ಸ್ಪೀಕರ್ ಆದೇಶ ಪ್ರಶ್ನಿಸಿ 17 ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ಸೂಚಿಸಿದೆ. ವಿಚಾರಣೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದ್ದರಿಂದ ಸದ್ಯಕ್ಕೆ ಅನರ್ಹರು ನಿಟ್ಟುಸಿರು ಬಿಟ್ಟಿದ್ದಾರೆ. ಅನರ್ಹ ಶಾಸಕರ ‌ಪರ‌ ಹಿರಿಯ ವಕೀಲ ವಿ.ಗಿರಿ ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ, ರಿಜಿಸ್ಟ್ರಾರ್‌ಗೆ ಪ್ರಕರಣವನ್ನು ಲಿಸ್ಟ್ ಮಾಡುವಂತೆ ಸೂಚಿಸಿತು. ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಇದೇ ವಾರ ಲಿಸ್ಟ್ ಮಾಡುವ ಸಾಧ್ಯತೆ ಇದೆ. ಬಹುತೇಕ ಒಂದೆರಡು ವಾರದಲ್ಲಿ ವಿಚಾರಣೆ ಆರಂಭವಾಗಬಹುದು. ರಿಜಿಸ್ಟ್ರಾರ್‌ ಲಿಸ್ಟ್‌ ಮಾಡಿದ ನಂತರ ಸಂಬಂಧಪಟ್ಟವರಿಗೆ ನೋಟಿಸ್‌ ಕಳುಹಿಸಲಾಗುವುದು. ವಿಚಾರಣೆ ದಿನ ಹಾಜರಾಗುವಂತೆ ಕಾಲಾವಕಾಶ ನೀಡಲಾಗುವುದು. ಒಂದು ಅಥವಾ ಎರಡು ವಾರದಲ್ಲಿ ವಿಚಾರಣೆಗೆ ಬರಬಹುದು ಎಂದು ಹೇಳಲಾಗಿದೆ.


from India & World News in Kannada | VK Polls https://ift.tt/2HnzHAr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...