
ಬರ್ಮಿಂಗ್‌ಹ್ಯಾಮ್: ಸಾಂಪ್ರಾದಾಯಿಕ ಬದ್ದ ವೈರಿಗಳಾದ ಹಾಗೂ ನಡುವಣ ಪ್ರತಿಷ್ಠಿತ ಆ್ಯಶಸ್ ಕದನಕ್ಕೆ ಭರ್ಜರಿ ಚಾಲನೆ ದೊರಕಲಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಇದೇ ಮೊದಲ ಬಾರಿಗೆ ಪರಿಚಯಿಸುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೆ ಭರ್ಜರಿ ಚಾಲನೆ ದೊರಕಿದೆ. ಅಷ್ಟೇ ಯಾಕೆ ಪ್ರತಿಯೊಂದು ಉಭಯ ಸರಣಿಗಳು ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳಲಿದ್ದು, ಎಲ್ಲ ಪಂದ್ಯಗಳಿಗೂ ಮಹತ್ವ ಸಿಗಲಿದೆ. ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ದ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ ಆಯ್ದುಕೊಂಡಿದೆ. ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಸಿಕ್ಕಿ ಬಿದ್ದು ನಿಷೇಧ ಶಿಕ್ಷೆಯನ್ನು ಎದುರಿಸಿರುವ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ಕ್ಯಾಮರೂನ್ ಬ್ಯಾಂಕ್ರಾಫ್ಟ್ ತಂಡವನ್ನು ಸೇರಿಕೊಂಡಿದ್ದಾರೆ. ಆಸೀಸ್ ತಂಡವನ್ನು ವಿಕೆಟ್ ಕೀಪರ್ ಟಿಮ್ ಪೈನ್ ಮುನ್ನಡೆಸುತ್ತಿದ್ದಾರೆ. ಅತ್ತ ಜೋ ರೂಟ್ ನೇತೃತ್ವದಲ್ಲಿ ಇಂಗ್ಲೆಂಡ್ ಬಲಿಷ್ಠವೆನಿಸಿದೆ. ಹಾಗೆಯೇ ಬೆನ್ ಸ್ಟೋಕ್ಸ್ ಉಪನಾಯಕ ಸ್ಥಾನವನ್ನು ವಹಿಸುತ್ತಿದ್ದಾರೆ. ಸ್ಟುವರ್ಟ್ ಬ್ರಾಡ್ ಹಾಗೂ ಜೇಮ್ಸ್ ಆಂಡ್ರೆಸನ್ ಅವರಂತಹ ಅನುಭವಿ ವೇಗಿಗಳು ತಂಡದಲ್ಲಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2YCI0SO