
ಹೊಸದಿಲ್ಲಿ: ತ್ರಿವಳಿ ತಲಾಖ್ ಮಸೂದೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ () ಸಚಿವ ಹಾಗೂ ಜಮಿಯತ್ ಉಲೆಮಾ-ಎ-ಹಿಂದ್ ಅಧ್ಯಕ್ಷ ಸಿದ್ದಿಕುಲ್ಲಾ ಚೌಧರಿ ಪ್ರತಿಪಾದಿಸಿದ್ದಾರೆ. ಮುಸ್ಲಿಂ ಸಮುದಾಯ ತ್ರಿವಳಿ ತಲಾಖ್ ಕಾನೂನು ಪಾಲಿಸಲು ಸಾಧ್ಯವಿಲ್ಲ. ಈ ಮಸೂದೆ ಇಸ್ಲಾಂ ಧರ್ಮದ ಮೇಲಿನ ಆಕ್ರಮಣವಾಗಿದೆ ಎಂದು ಸಿದ್ದಿಕುಲ್ಲಾ ದೂರಿದ್ದಾರೆ. ನಮಗೆ ಈ ಕಾನೂನು ಇಷ್ಟವಿಲ್ಲ. ಹೀಗಾಗಿ ಈ ಮಸೂದೆಯನ್ನು ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಸಮಿತಿ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ. ಜೂನ್ 30ರಂದು ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗಿರುವುದವ್ವು ಸ್ವಾಗತಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಟ್ವೀಟ್ ಮಾಡಿದ್ದರು.
from India & World News in Kannada | VK Polls https://ift.tt/2LXnqGU