ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಜೈತ್ರ'ಯಾತ್ರೆ'

ಹೊಸದಿಲ್ಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಶನಿವಾರ, ಆಗಸ್ಟ್ 24, 2019ರಂದು ನಿಧನರಾಗಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್‌ ಜೇಟ್ಲಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ 2 ವರ್ಷದಿಂದ ಅವರು ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆರಂಭಿಕ ಹಂತದಲ್ಲಿದ್ದ ಕ್ಯಾನ್ಸರ್‌ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿತ್ತು. ಕೀಮೋಥೆರಪಿ ಅವಶ್ಯಕತೆ ಇಲ್ಲ ಎನ್ನಲಾಗಿತ್ತು. 2018 ಮೇನಲ್ಲಿ ಅವರು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಈ ಸುದ್ದಿಯನ್ನು ಓದಿ: ಆಗಸ್ಟ್‌ 9 ರಂದು ಉಸಿರಾಟದ ಸಮಸ್ಯೆಯಿಂದ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಏಮ್ಸ್‌ ಅವರ ಹೆಲ್ತ್‌ ಬುಲೆಟಿನ್‌ ಸಹ ನೀಡಿತ್ತು. ಆಗಸ್ಟ್‌ 16 ರಂದು ಜೇಟ್ಲಿ ಶ್ವಾಸಕೋಶದಲ್ಲಿ ನೀರು ತುಂಬಿ, ಅವರ ಸ್ಥಿತಿ ಚಿಂತಾಜನಕವಾಗಿತ್ತು. 1952ರ ಡಿಸೆಂಬರ್ 28 ರಂದು ಜನಿಸಿದ ಅರುಣ್‌ ಜೇಟ್ಲಿ, ರಾಷ್ಟ್ರ ರಾಜಧಾನಿಯಲ್ಲೇ ತಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರು. ಕ್ಸೇವಿಯರ್‌ ಸ್ಕೂಲ್‌ನಲ್ಲಿ ಶಿಕ್ಷಣ ಮುಗಿಸಿದ್ದ ಅವರು, ಶ್ರೀರಾಮ ಕಾಲೇಜ್‌ ಆಫ್‌ ಕಾಮರ್ಸ್‌ನಿಂದ ವಾಣಿಜ್ಯ ಪದವಿ ಪಡೆದಿದ್ದರು. ದಿಲ್ಲಿ ವಿಶ್ವವಿದ್ಯಾಲಯದಿಂದ ಫ್ಯಾಕಲ್ಟಿ ಆಫ್‌ ಲಾ ಪದವಿ ಪಡೆದುಕೊಂಡಿದ್ದರು. ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ ಆಗಿದ್ದರು. ಇದನ್ನೂ ಓದಿ: 1991ರಿಂದ ಭಾರತೀಯ ಜನತಾ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು, ಪ್ರಧಾನಿ ಮೋದಿ ನೇತೃತ್ವದ ಮೊದಲ ಅವಧಿಯ ಸರಕಾರದಲ್ಲಿ ಹಣಕಾಸು ಇಲಾಖೆಯನ್ನು ನಿರ್ವಹಿಸಿದ್ದರು. ಅಂತೆಯೇ 1999ರಲ್ಲಿ ವಾಜಪೇಯಿ ಸರಕಾರದಲ್ಲಿ ಅವರು ಮಾಹಿತಿ ಹಾಗೂ ಪ್ರಸಾರ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಂತೆಯೇ ದೇಶದಲ್ಲಿ ಏಕರೂಪ ತೆರಿಗೆ ವ್ಯವಸ್ಥೆ, ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಜಾರಿ ವೇಳೆ ಪ್ರಮುಖ ಪಾತ್ರ ವಹಿಸಿದ್ದರು. ಹಣಕಾಸು ಇಲಾಖೆಯಡಿಯ ಆದಾಯ ಇಲಾಖೆ ಸೇರಿದಂತೆ ಇನ್ನಿತರ ವಿಭಾಗಗಳಲ್ಲಿ ಬದಲಾವಣೆ ತರುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಸುಪ್ರೀಂ ಕೋರ್ಟ್‌ ವಕೀಲಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿದ್ದ ಅರುಣ್‌ ಜೇಟ್ಲಿ, ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಜೇಟ್ಲಿಯವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ‌ಬಿವಿಪಿ)ನ ವಿದ್ಯಾರ್ಥಿ ನಾಯಕನಾಗಿದ್ದರು. ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅವರು 19 ತಿಂಗಳ ಕಾಲ ಸೆರೆವಾಸ ಅನುಭವಿಸಿದ್ದರು. ಈ ಬಳಿಕ ಜನಸಂಘವನ್ನು ಸೇರಿದ್ದರು. ರಾಜಕೀಯ ವ್ಯಾಪ್ತಿಯ ಜನತಾ ದಳದ ಶರದ್ ಯಾದವ್‌, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮಾಧವ್‌ರಾವ್ ಸಿಂಧ್ಯಾ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯೂ ಜೇಟ್ಲಿ ಕಕ್ಷಿದಾರರಾಗಿದ್ದಾರೆ. ಕಾನೂನು ಹಾಗೂ ಪ್ರಸಕ್ತ ವ್ಯವಹಾರಗಳ ಬಗ್ಗೆ ಹಲವಾರು ಪ್ರಕಟಣೆಗಳ ಲೇಖಕರಾಗಿದ್ದಾರೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಅಪರಾದಗಳು ಎಂಬ ವಿಷಯದ ಪತ್ರಗಳನ್ನು ಇಂಡೋ-ಬ್ರಿಟಿಷ್ ಲೀಗಲ್ ಫೋರಂನಲ್ಲಿ ಮಂಡಿಸಿದ್ದರು. ಜೂನ್ 1998ರಲ್ಲಿ ಡ್ರಗ್ಸ್ ಹಾಗೂ ಮನಿ ಲಾಂಡರಿಂಗ್ ಹಗರಣಗಳಿಗೆ ಸಂಬಂಧಿಸಿದಂತೆ ನಡೆದ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಸಭೆಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಭಾಗವಹಿಸಿದ್ದರು. ಬೋಫೋರ್ಸ್‌ ಹಗರಣ ದಾಖಲೆ ಕೂಡಿಟ್ಟದ್ದು ಜೇಟ್ಲಿಯೇ ! 1977 ರಿಂದ ವಕೀಲ ವೃತ್ತಿ ಮಾಡುತ್ತಿದ್ದ ಅರುಣ್ ಜೇಟ್ಲಿ, ಕೆಲ ಸಮಯ ಸುಪ್ರೀಂ ಕೋರ್ಟ್‌ನಲ್ಲೂ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. 1989ರಲ್ಲಿ ವಿ.ಪಿ. ಸಿಂಗ್ ಸರ್ಕಾರದಲ್ಲಿ ಅವರನ್ನು ಅಡಿಷನಲ್ ಸಾಲಿಸಿಟರ್ ಜನರಲ್ ಆಗಿ ನೇಮಕವಾಗಿದ್ದರು. ಬೋಫೋರ್ಸ್ ಹಗರಣದ ಎಲ್ಲಾ ಕಾಗದ ವ್ಯವಹಾರಗಳ ಕೆಲಸವನ್ನು ಮಾಡಿದರು. 1980-90ರ ವೇಳೆ ನಡೆದ ಬೋಫೋರ್ಸ್‌ ಹಗರಣಕ್ಕೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ಜೇಟ್ಲಿ ಸಂಗ್ರಹಿಸಿದ್ದರು. ಹಗರಣದಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸೇರಿದಂತೆ ಅನೇಕ ಕಾಂಗ್ರೆಸ್‌ ನಾಯಕರು ಕಿಕ್‌ಬ್ಯಾಕ್‌ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಅಗತ್ಯವಾದ ದಾಖಲೆಗಳನ್ನು ಅವರು ಸಂಗ್ರಹಿಸಿದ್ದರು. 1999ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ವಕ್ತಾರರಾಗಿ ಆಯ್ಕೆಯಾಗಿದ್ದ ಜೇಟ್ಲಿ, ವಾಜಪೇಯಿ ಸರಕಾರದಲ್ಲಿ ಮಾಹಿತಿ ಹಾಗೂ ಪ್ರಸಾರದ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2000ರಲ್ಲಿ ಕೇಂದ್ರ ಕಾನೂನು, ನ್ಯಾಯಾಂಗ ವ್ಯವಹಾರದ ಸಚಿವ ರಾಮ್ ಜೇಟ್ಮಲಾನಿ ರಾಜೀನಾಮೆ ನೀಡಿದ ಬಳಿಕ ಜೇಟ್ಲಿಗೆ ಕ್ಯಾಬಿನೆಟ್‌ ದರ್ಜೆ ಸಚಿವರಾಗಿ ಹೆಚ್ಚಿನ ಹೊಣೆ ಹೊತ್ತರು. ಅಂತೆಯೇ 2001ರಲ್ಲಿ ಸಾರಿಗೆ ಇಲಾಖೆ ಜತೆಗಿದ್ದ ಶಿಪ್ಪಿಂಗ್‌ ಸಚಿವಾಲಯವನ್ನು ವಿಭಾಗೀಕರಿಸಿ, ಪ್ರತ್ಯೇಕ ಮಂತ್ರಾಲಯ ಸ್ಥಾಪಿಸಲಾಯಿತು. ಅರುಣ್‌ ಜೇಟ್ಲಿ ನೂತನ ಸಚಿವಾಲಯದ ಸಚಿವರಾಗಿ ಜವಾಬ್ದಾರಿ ಹೊತ್ತಿದ್ದರು. 2001ರಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು, ಪಕ್ಷ ಸಂಘಟನೆಯ ಹೊಣೆ ಹೊತ್ತು, ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರಲ್ಲದೆ, ಪಕ್ಷದ ರಾಷ್ಟ್ರೀಯ ವಕ್ತಾರರಾದರು. 2003ರಲ್ಲಿ ವಾಣಿಜ್ಯ ಹಾಗೂ ಕೈಗಾರಿಕೆ ಮತ್ತು ಕಾನೂನು-ನ್ಯಾಯಾಂಗ ಇಲಾಖೆಯ ಕ್ಯಾಬಿನೆಟ್‌ ದರ್ಜೆ ಸಚಿವರಾಗಿ ಅರುಣ್‌ ಜೇಟ್ಲಿ ಆಯ್ಕೆಯಾಗಿದ್ದರು. 2004ರಲ್ಲಿ ವಾಜಪೇಯಿ ನೇತೃತ್ವದ ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ವೇಳೆ, ಅರುಣ್‌ ಜೇಟ್ಲಿ ಮತ್ತೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರೆದರು. ರಾಜ್ಯಸಭೆಯ ಪ್ರತಿಪಕ್ಷ ನಾಯಕ 2006ರಿಂದ ರಾಜ್ಯಸಭೆ ಸದಸ್ಯರಾಗಿದ್ದ ಅರುಣ್‌ ಜೇಟ್ಲಿ ಅವರನ್ನು, ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ 2009ರಲ್ಲಿ ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿದ್ದರು. ಅಂತೆಯೇ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಅರುಣ್‌ ಜೇಟ್ಲಿ ಕಾರ್ಯ ನಿರ್ವಹಿಸಿದ್ದರು. ಒಬ್ಬರು 2 ಹುದ್ದೆಗಳನ್ನು ನಿರ್ವಹಿಸಬಾರದೆಂಬ ಪಕ್ಷದ ನಿಯಮಕ್ಕೆ ಬದ್ಧರಾಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜ್ಯಸಭೆಯಲ್ಲಿ ಅಣ್ಣಾ ಹಜಾರೆ ಅವರ ಲೋಕಪಾಲ್‌ ಮಸೂದೆ, ಮಹಿಳಾ ಮೀಸಲಾತಿ ಮಸೂದೆಗೆ ಅವರು ಬೆಂಬಲ ನೀಡಿದ್ದರು. ಚುನಾವಣೆಗಳಿಂದ ದೂರವೇ ಇದ್ದ ಜೇಟ್ಲಿ ಕೇಂದ್ರದಲ್ಲಿ ವಾಜಪೇಯಿ ಸರಕಾರದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಜೇಟ್ಲಿ, 2014ರವರೆಗೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 2014ರಲ್ಲಿ ನವಜೋತ್‌ ಸಿಂಗ್‌ ಸಿಧು ಅವರ ಬದಲಿಗೆ ಅಮೃತ್‌ಸರದಿಂದ ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್‌ ನೀಡಲಾಗಿತ್ತು. ಆದರೆ ಅವರು ಈ ಚುನಾವಣೆಯಲ್ಲಿ ಅಮರಿಂದರ್‌ ಸಿಂಗ್‌ ವಿರುದ್ಧ ಸೋಲು ಕಂಡಿದ್ದರು. ಗುಜರಾತ್‌ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರನ್ನು 2018 ಮಾರ್ಚ್‌ನಲ್ಲಿ ಉತ್ತರ ಪ್ರದೇಶದಿಂದ ಮರು ಆಯ್ಕೆ ಮಾಡಲಾಗಿತ್ತು.


from India & World News in Kannada | VK Polls https://ift.tt/2ZoWdmH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...