ಅರುಣಾಸ್ತಮಾನ: ಜೇಟ್ಲಿ ಪಂಚಭೂತಗಳಲ್ಲಿ ಲೀನ

ಹೊಸದಿಲ್ಲಿ: ತೀವ್ರ ಅನಾರೋಗ್ಯದಿಂದಾಗಿ ಶನಿವಾರ ಮಧ್ಯಾಹ್ನ ಕೊನೆಯುಸಿರೆಳೆದ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಪುತ್ರ ರೋಹನ್ ಜೇಟ್ಲಿ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದರು. ರಾಷ್ಟ್ರ ರಾಜಧಾನಿಯ ಯಮುನಾ ನದಿತಟದಲ್ಲಿರುವ ನಿಗಮ್‌ಬೋಧ್ ಘಾಟ್‌ನಲ್ಲಿ ನಡೆದ ಅಂತಿಮ ಸಂಸ್ಕಾರದಲ್ಲಿ ಮೃತರ ಸಂಬಂಧಿಕರು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಗೌತಮ್ ಗಂಭೀರ್, ಬಿಜೆಪಿ ಹಿರಿಯ ಮುಖಂಡರಾದ ಲಾಲ್‌ಕೃಷ್ಣ ಅಡ್ವಾಣಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು, , ಶರದ್ ಪವಾರ್, ಚಂದ್ರಬಾಬು ನಾಯ್ಡು ಸೇರಿದಂತೆ ವಿರೋಧ ಪಕ್ಷದ ನಾಯಕರು ಪಾಲ್ಗೊಂಡಿದ್ದರು. ಭಾನುವಾರ ಮುಂಜಾನೆ ದಿಲ್ಲಿಯ ನಿವಾಸದಿಂದ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಬಿಜೆಪಿ ಮುಖ್ಯ ಕಾರ್ಯಾಲಯಕ್ಕೆ ಕೊಂಡೊಯ್ಯಲಾಗಿತ್ತು. ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಹರ್ಷ ವರ್ಧನ್, ಪಿಯೂಷ್ ಗೋಯಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಸೇರಿದಂತೆ ಹಲವು ಗಣ್ಯರು ಬಿಜೆಪಿಯ ಹಿರಿಯ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದರು. ಅಲ್ಲಿಂದ ಪುಷ್ಪಾಲಂಕೃತ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ನಿಗಮ್‌ಬೋಧ್ ಘಾಟ್‌‌ಗೆ ಕೊಂಡೊಯ್ಯಲಾಗಿತ್ತು.



from India & World News in Kannada | VK Polls https://ift.tt/2HomMyf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...