ಗದಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಸಾರಿಗೆ ಬಸ್ ಪಲ್ಟಿ: 10ಕ್ಕೂ ಅಧಿಕ ಜನರಿಗೆ ಗಾಯ

ಗದಗ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ 10ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ‌ ಜಾವ ಈ ಘಟನೆ ನಡೆದಿದ್ದು, ಬಸ್ ಕಲಬುರ್ಗಿಯಿಂದ ಧಾರವಾಡಕ್ಕೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಂಜೀವ್ ಕುಮಾರ್, ಮೊಹ್ಮದ್ ಹರ್ಷದ್, ಮಳೇಂದ್ರಯ್ಯ, ಕೇದಾರನಾಥ, ವಾಸುದೇವರಾವ್, ಭೀಮರೆಡ್ಡಿ, ಭಾಗ್ಯವಂತ, ತೀರ್ಥರಾಜ, ಮಂಜುನಾಥ ಸೇರಿದಂತೆ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


from India & World News in Kannada | VK Polls https://ift.tt/30eHBYd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...