ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಸೇನಾ ರ‍್ಯಾಲಿ ಮುಗಿಸಿಕೊಂಡು ಬರುತ್ತಿದ್ದ 10 ಯುವಕರ ದಾರುಣ ಸಾವು

(ಜಿಂದ್) ಹರಿಯಾಣ: ಆಟೋ ರಿಕ್ಷಾಗೆ ಆಯಿಲ್ ಟ್ಯಾಂಕರ್ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹರಿಯಾಣದ ಜಿಂದ್‌ ಪಟ್ಟಣದ ರಾಮರಾಯ್ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರೋಹ್ಟಕ್‌ನ ಪಿಜಿಐ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರೆಲ್ಲರೂ ಸೇನಾ ನೇಮಕಾತಿ ರ‍್ಯಾಲಿ ಮುಗಿಸಿಕೊಂಡು ಬರುತ್ತಿದ್ದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕರು ಸೇನಾ ನೇಮಕಾತಿ ರ‍್ಯಾಲಿ ಮುಗಿಸಿ ಮುಗಿಸಿಕೊಂಡು ಆಟೋ ರಿಕ್ಷಾದಲ್ಲಿ ಜಿಂದ್ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ರಾಮರಾಯ್ ಗ್ರಾಮದ ಬಳಿ ತೈಲ ಟ್ಯಾಂಕರ್‌ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಯುವಕರ ಕುಟುಂಬಕ್ಕೆ ಮಾಹಿತಿ ಮುಟ್ಟಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


from India & World News in Kannada | VK Polls https://ift.tt/2kYFrZr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...