ಶಿವಮೊಗ್ಗ: ಚಲಿಸುತ್ತಿದ್ದ ಟವೆರಾ ಕಾರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗ ಧಗನೇ ಹೊತ್ತಿ ಉರಿದ ಘಟನೆ ಸಾಗರ ಸಮೀಪದ ಕಾಸ್ಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಿನ್ನೆ (ಮಂಗಳವಾರ) ರಾತ್ರಿ 1.30 ಗಂಟೆ ಸುಮಾರಿಗೆ ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಸಂಚರಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಓರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
from India & World News in Kannada | VK Polls https://ift.tt/2n3phP8