ಕಾರ್ಮಿಕರ ನಿಧಿ ರಕ್ಷಣೆಗೆ ನಿಂತ ಅಧಿಕಾರಿಯನ್ನೇ ಎತ್ತಂಗಡಿ ಮಾಡಿದ ಸರ್ಕಾರ : ರೋಹಿಣಿ ಸಿಂಧೂರಿ ವರ್ಗಾವಣೆ ಮರ್ಮ

ಬೆಂಗಳೂರು: ಕಕಟ್ಟಡ ಕಾರ್ಮಿಕ ಕಲ್ಯಾಣ ನಿಧಿಯ ದುರ್ಬಳಕೆಗೆ ಒಪ್ಪದ ಐಎಎಸ್‌ ಅಧಿಕಾರಿ ಅವರನ್ನು ಯಾವುದೇ ಹುದ್ದೆ ತೋರಿಸದೆ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ. ಈ ಕುರಿತು ಅಧಿಕಾರಿಗಳ ವಲಯದಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದ ರೊಹಿಣಿ ಸಿಂಧೂರಿ ಅವರನ್ನು ಹಲವು ಆರೋಪಗಳ ಮೇರೆಗೆ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ, ಇಲ್ಲಿಯೂ, ಬಡವರ ಪರ ಕೆಲಸ ಮಾಡದ ಸಿಂಧೂರಿ, ಉಳ್ಳವರ ಪರ ಲಾಭಿ ಮಾಡುತ್ತಾ ಅವರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹುದ್ದೆ ತೋರಿಸದೇ ವರ್ಗಾವಣೆ ಶಿಕ್ಷೆ ನೀಡಲಾಗಿತ್ತು. ಆದರೆ ಈಗ ಈ ವರ್ಗಾವಣೆ ಹಿಂದಿನ ರಹಸ್ಯ ಬೆಳಕಿಗೆ ಬರುತ್ತಿದೆ. ಕಾರ್ಮಿಕರು ಮತ್ತು ಅವರ ಮಕ್ಕಳ ಕಲ್ಯಾಣ ಸೇವೆಗಾಗಿ ತಂತ್ರಜ್ಞಾನ ಆಧಾರಿತ ಸೇವೆಯನ್ನು (24/7 ಸಹಾಯವಾಣಿ) ಟೆಂಡರ್‌ ಕರೆಯದೆ ಕಿಯೋನಿಕ್ಸ್‌ಗೆ ನೀಡಬೇಕೆಂದು ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬರು ಒತ್ತಡ ಹಾಕಿದ್ದರು. ಆದರೆ, ನಿಯಮವನ್ನು ಮೀರಲು ಸಾಧ್ಯವೇ ಇಲ್ಲ ಎಂದು ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದರು. ಹೀಗಾಗಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಲಾಗಿದ. ಪ್ರಸ್ತುತ ಕಾರ್ಮಿಕ ಆಯುಕ್ತ ಕೆ.ಜಿ.ಶಾಂತಾರಾಮ್‌ ಮಂಡಳಿಯ ಚಾರ್ಜ್‌ ವಹಿಸಿಕೊಂಡಿದ್ದಾರೆ. ಈ ಕುರಿತು ಐಎಎಸ್‌ ಅಧಿಕಾರಿಗಳ ಸಂಘದ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರಿಗೆ ರೋಹಿಣಿ ಸಿಂಧೂರಿ ದೂರು ಸಲ್ಲಿಸಿದ್ದಾರೆ. ಬಡ ಕಾರ್ಮಿಕರು ಕಚೇರಿಗೆ ಬಂದು ತಮ್ಮ ಕೆಲಸ ಮಾಡಿಕೊಡುವಂತೆ ಗೋಗರೆದರೂ, ಈ ಕುರಿತು ಅಧಿಕಾರಿ ರೋಹಿಣಿ ಸಿಂಧೂರಿ ಗಮನಹರಿಸುತ್ತಿರಲಿಲ್ಲ. ಇದರಿಂದ ಬೇಸರಗೊಂಡ ಕಾರ್ಮಿಕರು ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಪದೇ ಪದೇ ರೋಹಿಣಿ ಸಿಂಧೂರಿ ವಿರುದ್ಧ ಕಾರ್ಮಿಕರಿಂದ ದೂರು ದಾಖಲಾದ ಪರಿಣಾಮ ರಾಜ್ಯ ಸರ್ಕಾರ ರೋಹಿಣಿ ಅವರನ್ನು ಬೇರೊಂದು ಇಲಾಖೆಗೆ ವರ್ಗಾವಣೆ ಮಾಡಿರುವುದಾಗಿ ಮೂಲಗಳು ತಿಳಿಸಿವೆ. ಈ ಹಿಂದೆ ಹಾಸನದ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಪಕ್ಷಕ್ಕೆ ಪೂರಕವಾಗಿ ಕೆಲಸ ನಿರ್ವಹಿಸಿದ ಆರೋಪದ ಮೇಲೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿತ್ತು.


from India & World News in Kannada | VK Polls https://ift.tt/2kHXhjf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...