ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಪುಣೆಯಲ್ಲಿ ಗೋಡೆ ಕುಸಿದು ಐವರು ಸಾವು

ಪುಣೆ: ಭೀಕರ ಮಳೆಯಿಂದ ಗೋಡೆ ಕುಸಿದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯ ಸಹಕಾರ ನಗರದಲ್ಲಿ ನಡೆದಿದೆ. ಪುಣೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಹಕಾರ ನಗರ ಪ್ರದೇಶದಲ್ಲಿ ಶೀಥಿಲಗೊಂಡ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಪುಣೆ, ಮುಂಬಯಿ ಸೇರಿದಂತೆ ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪುರಂದರ್, ಬಾರಾಮತಿ, ಭೋರ್ ಮತ್ತು ಹವೇಲಿ ತಹಸಿಲ್ ಸೇರಿದಂತೆ ಪುಣೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುಣೆಯಲ್ಲಿ ಭಾರಿ ಮಳೆಯಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಮೂರು ರಾಷ್ಟ್ರೀಯ ವಿಪತ್ತು ಪಡೆ (ಎನ್‌ಡಿಆರ್‌ಎಫ್) ನಿಯೋಜಿಸಲಾಗಿದೆ. ಮುಂಬಯಿ ಸೇರಿದಂತೆ ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಬುಧವಾರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು.


from India & World News in Kannada | VK Polls https://ift.tt/2nhupix

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...