ನವದೆಹಲಿ: ಕೆಲ ದಿನಗಳಿಂದ ವಿಚಾರಣೆ ಹೆಸರಲ್ಲಿ ಕಿರುಕುಳದಿಂದಾಗಿ ಶಾಸಕ ಅವರ ಆರೋಗ್ಯ ಹದಗೆಟ್ಟಿದೆ ಎಂದು ರಾಜ್ಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಆರೋಪಿಸಿದ್ದಾರೆ. ರಾಮ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಡಿಕೆಶಿಯನ್ನು ಭೇಟಿಯಾದ ನಂತರ ಎಎನ್‌ಐ ಜತೆ ಮಾತನಾಡಿದ ಶ್ರೀನಿವಾಸ್, ನಿರಂತರ ಕಿರುಕುಳದಿಂದಾಗಿ ಡಿಕೆಶಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ವೈದ್ಯರು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಆದರೆ, ವಶಕ್ಕೆ ಪಡೆಯಲು ಪ್ರಯತ್ನಿಸುತ್ತಿದೆ ಎಂದರು. ಮಾಜಿ ಗೃಹ ಮಂತ್ರಿ ರಾಮಲಿಂಗಾ ರೆಡ್ಡಿ ಕೂಡ ರಾಮ್ ಲೋಹಿಯಾ ಆಸ್ಪತ್ರೆಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಜಾರಿ ನಿರ್ದೇಶನಾಲಯವು ಡಿಕೆಶಿ ಅವರನ್ನು ರೋಸ್ ಅವಿನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯದಲ್ಲಿ ಇಂದು ಹಾಜರುಪಡಿಸುವ ಸಾಧ್ಯತೆ ಇದೆ. ವಿಶೇ ಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಕೂಡ ಡಿಕೆಶಿ ಬಂಧನವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
from India & World News in Kannada | VK Polls https://ift.tt/2Zz2Svt