ಮಿಸ್ಬಾ ಉಲ್ ಹಕ್ ಪಾಕಿಸ್ತಾನ ತಂಡದ ಪ್ರಧಾನ ಕೋಚ್; ವಕಾರ್ ಯೂನಿಸ್ ಬೌಲಿಂಗ್ ಕೋಚ್

ಹೊಸದಿಲ್ಲಿ: ನಿರೀಕ್ಷೆಯಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರನಾಗಿ ಮಾಜಿ ನಾಯಕ ಅವರನ್ನು ನೇಮಕಗೊಳಿಸಲಾಗಿದೆ. ಮಿಸ್ಬಾ ಉಲ್ ಹಕ್ ಕೇವಲ ಕೋಚ್ ಅಷ್ಟೇ ಅಲ್ಲದೆ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದ ಜವಾಬ್ದಾರಿಯನ್ನು ವಹಿಸಲಿದ್ದಾರೆ. ಅದೇ ರೀತಿ ಬೌಲಿಂಗ್ ಕೋಚ್ ಸ್ಥಾನಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಐದು ಮಂದಿ ಸದಸ್ಯರ ಸಮಿತಿಯು ಮಿಸ್ಬಾ ಹಾಗೂ ಯೂನಿಸ್ ಅವರನ್ನು ಆಯ್ಕೆಗೊಳಿಸಿದೆ. ಇದರಂತೆ ಪ್ರತಿಕ್ರಿಯೆ ನೀಡಿರುವ ಮಿಸ್ಬಾ ಉಲ್ ಹಕ್, ತಮ್ಮ ಮೇಲೆ ಅತಿ ಹೆಚ್ಚಿನ ಜವಾಬ್ದಾರಿಯಿದ್ದು, ಎಲ್ಲ ಸವಾಲುಗಳಿಗೂ ಸಿದ್ಧವಿರುವುದಾಗಿ ತಿಳಿಸಿದರು. ಏಕದಿನ ವಿಶ್ವಕಪ್ ಸೋಲಿನ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಗಮನಾರ್ಹ ಬದಲಾವಣೆಯ ಬಗ್ಗೆ ಪ್ರಧಾನಿ ಹಾಗೂ ಮಾಜಿ ವಿಶ್ವಕಪ್ ವಿಜೇತ ನಾಯಕ ಇಮ್ರಾನ್ ಖಾನ್ ಸೂಚನೆ ನೀಡಿದ್ದರು. 45ರ ಹರೆಯದ ಮಾಜಿ ಆಟಗಾರ ಮಿಸ್ಬಾ ಉಲ್ ಹಕ್ 75 ಟೆಸ್ಟ್, 162 ಏಕದಿನ ಹಾಗೂ 39 ಟ್ವೆಂಟಿ-20 ಪಂದ್ಯಗಳಲ್ಲಿ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ್ದಾರೆ. ಅಂದ ಹಾಗೆ ವಕಾರ್ ಯೂನಿಸ್ ಈ ಹಿಂದೆಯೂ ಪಾಕಿಸ್ತಾನದ ಮುಖ್ಯ ಕೋಚ್ ಹಾಗೂ ಬೌಲಿಂಗ್ ಕೋಚ್ ಹುದ್ದೆಯನ್ನು ನಿಭಾಯಿಸಿದ್ದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2ZOO0Em

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...