ಉಭಯ ರಾಷ್ಟ್ರಗಳು ಒಪ್ಪಿದರೆ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆಗೆ ಸಿದ್ಧ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ವಾಷಿಂಗ್ಟನ್: ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕಾ ಅಧ್ಯಕ್ಷ ಮತ್ತೊಮ್ಮೆ ಹೇಳಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಗಾಗಿ ಅಮೆರಿಕಗೆ ಆಗಮಿಸಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಟ್ರಂಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕರೆ, ನಾನು ಅದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧ ಎಂದಿದ್ದಾರೆ. ಕಾಶ್ಮೀರ ವಿವಾದ ಒಂದು ಸಂಕೀರ್ಣ ವಿಷಯವಾಗಿದ್ದು, ಈ ಹಗ್ಗಜಗ್ಗಾಟ ಬಹಳ ದಿನದಿಂದ ನಡೆಯುತ್ತಿದೆ. ಉಭಯ ರಾಷ್ಟ್ರಗಳು ಒಪ್ಪುವುದಾದರೆ, ನಾನು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಟ್ರಂಪ್ ಹೇಳಿದ್ದಾರೆ. ಈ ಹಿಂದೆ ಅನೇಕ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವ ಇಂಗಿತ ವ್ಯಕ್ತಪಡಿಸಿದ್ದರು. ಭಾರತ ಮತ್ತು ಪಾಕಿಸ್ತಾನದ ಪ್ರಧಾನಮಂತ್ರಿಗಳೀಗ ಅಮೆರಿಕದ ನ್ಯೂಯಾರ್ಕ್‌ನಲ್ಲಿದ್ದಾರೆ. ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಎರಡೂ ರಾಷ್ಟ್ರಗಳ ಪ್ರಧಾನಿಗಳು ಭಾಷಣ ಮಾಡಲಿದ್ದಾರೆ. ಇದರ ಜೊತೆಯಲ್ಲೇ ಅಮೆರಿಕ ಸೇರಿದಂತೆ ವಿವಿಧ ದೇಶಗಳ ಮುಖಂಡರ ಜೊತೆಗೂ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.


from India & World News in Kannada | VK Polls https://ift.tt/2kJF30M

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...