ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿಲು ಜಗತ್ತೇ ಒಂದಾಗಿದೆ: ಮೋದಿ

ಹೊಸದಿಲ್ಲಿ: ರಾಷ್ಟ್ರಪತಿ ಅವರ 150ನೇ ಜನ್ಮದಿನಾಚರಣೆ ನಿಮಿತ್ತ ಅವರಿಗೆ ಗೌರವ ಸಲ್ಲಿಸಲು ಸಂಪೂರ್ಣ ಜಗತ್ತು ಒಂದಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಗಾಂಧಿವಾದಿ ಆಲೋಚನೆಗಳ ಪ್ರಸ್ತುತತೆ ಕುರಿತು ವಿಶ್ವಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ಮಹಾತ್ಮ ಗಾಂಧಿ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಮೋದಿ ಅವರು ಸೆ.24ರಂದು (ಮಂಗಳವಾರ) ವಿಶ್ವಸಂಸ್ಥೆಯ 'ಆರ್ಥಿಕ ಮತ್ತು ಸಾಮಾಜಿಕ ಮಂಡಳಿ'ಯಲ್ಲಿ ವಿಶೇಷ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸಮಕಾಲೀನ ಜಗತ್ತಿನಲ್ಲಿ ಗಾಂಧಿಯ ಪ್ರಸ್ತುತತೆ' ಹೆಸರಿನಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಇದೇ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿ ಕುರಿತ ವಿಶೇಷ ಅಂಚೆಚೀಟಿಯನ್ನು ನಾಯಕರು ಬಿಡುಗಡೆ ಮಾಡಿದರು. ಕೇಂದ್ರ ಕಚೇರಿಯಲ್ಲಿ 50 ಕಿಲೋ ವ್ಯಾಟ್ ತೂಕದ ಗಾಂಧಿ ಸೋಲಾರ್ ಪಾರ್ಕ್ ಅನ್ನು ಸಹ ಅವರು ಉದ್ಘಾಟಿಸಿದರು. ಅಮೆರಿಕಾದ ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟನಿಯೊ ಗುಟೆರಸ್ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಹಾಗೂ ಇತರ ಹಲವು ಗಣ್ಯರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/2mBQaJv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...