ಮನೀಶ್ ಪಾಂಡೆ ನಾಯಕನಾಟ; ದಕ್ಷಿಣ ಆಫ್ರಿಕಾ ಎ ವಿರುದ್ಧ ಭಾರತ ಎ ತಂಡಕ್ಕೆ ಸರಣಿ ಗೆಲುವು

ತಿರುವನಂತಪುರ: ಕರ್ನಾಟಕದ ನಾಯಕನಾಟದ (81) ನೆರವಿನಿಂದ ಭಾರತ ಎ ತಂಡವು ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ದ ನಡೆದ ಮಳೆ ಬಾಧಿತ ಮೂರನೇ ಅನಧಿಕೃತ ಏಕದಿನ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಅನಧಿಕೃತ ಏಕದಿನ ಸರಣಿಯನ್ನು ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿರುವಂತೆಯೇ 3-0 ಅಂತರದ ವಶಪಡಿಸಿಕೊಂಡಿದೆ. ತಿರುವನಂತಪುರ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮಳೆಯಿಂದಾಗಿ ತೇವಯುಕ್ತ ಮೈದಾನದಿಂದ 30 ಓವರ್‌ಗಳಿಗೆ ಇಳಿಕೆಗೊಳಿಸಲ್ಪಟ್ಟ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಎ ಎಂಟು ವಿಕೆಟ್ ನಷ್ಟಕ್ಕೆ 207 ರನ್ ಪೇರಿಸಿತ್ತು. ವಿಕೆಟ್ ಕೀಪರ್ ಹೆನ್ರಿಚ್ ಕ್ಲಾಸೆಲ್ 44, ಜ್ಯಾನ್‌ಮನ್ ಮಲನ್ 37, ಮ್ಯಾಥ್ಯೂ ಬ್ರಿಟ್ಜ್ಕೆ 36 ಹಾಗೂ ನಾಯಕ ತೆಂಬ ಬಾವುಮ 27 ರನ್ ಗಳಿಸಿದ್ದರು. ಭಾರತ ಎ ಪರ ದೀಪಕ್ ಚಹರ್ ಹಾಗೂ ಕೃುಣಾಲ್ ಪಾಂಡ್ಯ ತಲಾ ಎರಡು ವಿಕೆಟುಗಳನ್ನು ಹಂಚಿಕೊಂಡರು. ಬಳಿಕ ಗುರಿ ಬೆನ್ನಟ್ಟಿದ ಭಾರತ ಎ ತಂಡಕ್ಕೆ ಮನೀಷ್ ಪಾಂಡೆ (81), ಶಿವಂ ದುಬೆ (45*) ಹಾಗೂ ವಿಕೆಟ್ ಕೀಪರ್ ಇಶಾನ್ ಕಿಶಾನ್ (40) ಉಪಯುಕ್ತ ಬ್ಯಾಟಿಂಗ್ ನೆರವಿನಿಂದ 27.5 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2PDt4R8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...