ಹುಬ್ಬಳ್ಳಿ: ಬಿಜೆಪಿಯವರು ಅನರ್ಹ ಶಾಸಕರ ಸಮಸ್ಯೆಗೆ ಸ್ಪಂದಿಸಲು ವರಿಷ್ಠರ ಬಳಿ ಹೋಗುತ್ತಾರೆ. ಆದರೆ, ರಾಜ್ಯದ ಸಮಸ್ಯೆಗೆ ಮಾತ್ರ ಸ್ಪಂದಿಸಲು ಎಂದು ಕೆಪಿಸಿಸಿ ಅಧ್ಯಕ್ಷ ಆರೋಪಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಬಂದಾಗ ಕೇಂದ್ರ ಸರಕಾರ ಸ್ಪಂದಿಸಬೇಕು. ಆದರೆ, ರಾಜ್ಯದಲ್ಲಿ ಪ್ರವಾಹ ಸಂಭವಿಸಿ ಸಾಕಷ್ಟು ಸಮಸ್ಯೆಯಾಗಿದ್ದರೂ, ಕೇಂದ್ರ ಸರಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ ಎಂದು ಕಿಡಿಕಾರಿದರು. ನೆರೆ ಪರಿಹಾರ ಒದಗಿಸಲುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಇಂದು (ಮಂಗಳವಾರ) ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. 25 ಜನ ಸಂಸದರಿದ್ದರೂ, ರಾಜ್ಯದ ಸಮಸ್ಯೆಯನ್ನು ಎತ್ತಿ ಹಿಡಿಯುತ್ತಿಲ್ಲ. ನೆರೆ ಸಂಬಂಧ ಇಲ್ಲಿಯವರೆಗೂ ಯಾವುದೇ ಸರ್ವಪಕ್ಷ ಸಭೆ ಕರೆದಿಲ್ಲ. ಹೀಗಾಗಿ ಬಿಜೆಪಿಯ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಕೈಗೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
from India & World News in Kannada | VK Polls https://ift.tt/2ldMltK