ನಿಮ್ಮೊಂದಿಗೆ ನಾವಿದ್ದೇವೆ: ಚಿದಂಬರಂ, ಡಿಕೆಶಿ ಭೇಟಿಗೆ ತಿಹಾರ್ ಜೈಲಿಗೆ ಬಂದ ಸೋನಿಯಾ, ಮನಮೋಹನ್

ಹೊಸದಿಲ್ಲಿ: ಜೈಲು ಸೇರಿರುವ ತಮ್ಮ ಪಕ್ಷದ ಇಬ್ಬರು ಪ್ರಭಾವಿ ನಾಯಕರನ್ನು ಭೇಟಿಯಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋಮವಾರ ಮುಂಜಾನೆ ತಿಹಾರ್ ಜೈಲಿಗೆ ಭೇಟಿ ನೀಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ತಿಹಾರ್ ಜೈಲಿಗೆ ಆಗಮಿಸಿದ ಅವರು ಕೇವಲ ಪಿ. ಅವರನ್ನು ಭೇಟಿಯಾಗಲಷ್ಟೇ ಸಾಧ್ಯವಾಯಿತು. ಡಿಕೆಶಿ ಅವರನ್ನು ಭೇಟಿಯಾಗಲು ಕೈ ಅಧಿನಾಯಕಿಗೆ ಅವಕಾಶ ಸಿಗಲಿಲ್ಲ. ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸೆರೆವಾಸದಲ್ಲಿದ್ದರೆ, ಕರ್ನಾಟಕದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನವನ್ನೆದುರಿಸುತ್ತಿದ್ದಾರೆ. ನಾಯಕರಿಬ್ಬರಿಗೆ ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಿ ನೈತಿಕ ಸ್ಥೈರ್ಯ ತುಂಬಲು ಸೋನಿಯಾ ಜೈಲಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. ಅವರ ಪುತ್ರ ಕಾರ್ತಿ ಚಿದಂಬರಂ ಕೂಡ ಇಂದು ತಂದೆಯನ್ನು ಭೇಟಿಯಾಗಿದ್ದರು. INX ಮೀಡಿಯಾ ಹಗರಣ ಸಂಬಂಧ ಇಡಿ ಹಾಗೂ ಸಿಬಿಐ ಎರಡೂ ತನಿಖಾ ಸಂಸ್ಥೆಗಳು ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿವೆ. INX ಮೀಡಿಯಾ ಹಗರಣದ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದರೆ, ಇದೇ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಇಡಿ ನಡೆಸುತ್ತಿದೆ. 2007ರಲ್ಲಿ INX ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ವಿದೇಶ ನೇರ ಬಂಡವಾಳ ಸ್ವೀಕಾರಕ್ಕೆ ಹಣಕಾಸು ಸಚಿವಾಲಯ ಅನುಮತಿ ನೀಡಿತ್ತು. ಈ ಅನುಮತಿ ನೀಡಿದ 10 ವರ್ಷಗಳ ಬಳಿಕ ಅಂದರೆ 2017ರಲ್ಲಿ ಸಿಬಿಐ ಹಾಗೂ ಇಡಿ ಎರಡೂ ತನಿಖಾ ಸಂಸ್ಥೆಗಳು ಚಿದು ವಿರುದ್ಧ ಪ್ರಕರಣ ದಾಖಲಿಸಿದ್ದವು.


from India & World News in Kannada | VK Polls https://ift.tt/35bXe1A

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...