ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ 'ಡಿ' ದರ್ಜೆಯ ನೌಕರ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ. ವಿಶ್ವವಿದ್ಯಾಲಯದ ಸಿಬ್ಬಂದಿ ಹನುಮಂತರಾಯ (40) ನೇಣು ಹಾಕಿಕೊಂಡು ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೌಕರನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತಿನಿಖೆ ಬಳಿಕವಷ್ಟೇ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
from India & World News in Kannada | VK Polls https://ift.tt/2ly45QR