ಬೆಂಗಳೂರು: ಐಪಿಎಸ್ ಅಧಿಕಾರಿಗಳು, ರಾಜಕಾರಣಿಗಳು ಸೇರಿದಂತೆ ಹಲವರ ಫೋನ್ ಟ್ಯಾಪಿಂಗ್ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಅಧಿಕಾರಿಗಳು, ಹಿಂದಿನ ಪೊಲೀಸ್ ಆಯುಕ್ತ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶೋಲೆ ವೃತ್ತದ ಬಳಿಯಿರುವ ಆಫೀಸರ್ಸ್ ಪೋಲಿಸ್ ಕ್ವಾಟ್ರಸ್ ನಲ್ಲಿರುವ ಹಲೋ ಮನೆ ಮೇಲೆ ಸುಮಾರು 20 ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಅಲೋಕ್ ಕುಮಾರ್ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಬಿಜೆಪಿಯ ಆಪರೇಷನ್ ಕಮಲ ಸೇರಿದಂತೆ ಇನ್ನಿತರ ವಿಚಾರಗಳಿಗಾಗಿ ರಾಜಕಾರಣಿಗಳು, ಪೊಲೀಸರು, ಮಠಾಧೀಶರು, ಖಾಸಗಿ ವ್ಯಕ್ತಿಗಳ ಫೋನ್ ಟ್ಯಾಪಿಂಗ್ ಮಾಡಲಾಗಿತ್ತು ಎಂಬ ಆರೋಪವಿದೆ. ಈ ಸಂಬಂಧ ರಾಜ್ಯ ಸರ್ಕಾರ ಸಮಗ್ರ ತನಿಖೆ ಗಾಗಿ ಸಿಬಿಐ ಗೆ ವಹಿಸಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ್ದರು.
from India & World News in Kannada | VK Polls https://ift.tt/2mQkLDg