
ಹೊಸದಿಲ್ಲಿ: ಅತ್ತ ವೆಸ್ಟ್‌ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಯಲ್ಲಿ ಟೀಮ್ ಇಂಡಿಯಾ ಪರ ಗಮನಾರ್ಹ ಪ್ರದರ್ಶನವನ್ನು ನೀಡಿದ್ದಾರೆ. ಅಂತಿಮ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮೂರು ಪ್ರಮುಖ ವಿಕೆಟುಗಳನ್ನು ಕಬಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇತ್ತ ತವರಿನಲ್ಲಿ ಭಾರತೀಯ ವೇಗಿ ಮೊಹಮ್ಮದ್ ಶಮಿ ವಿರುದ್ಧ ಅರೆಸ್ಟ್ ವಾರೆಂಟ್ ದಾಖಲಾಗಿದೆ. ಪತ್ನಿ ಮೇಲೆ ಕೌಟುಂಬಿಕ ದೌರ್ಜನ್ಯದಡಿಯಲ್ಲಿ ಆರೋಪ ಎದುರಿಸುತ್ತಿರುವ ಶಮಿ ವಿರುದ್ಧ ಪಶ್ಚಿಮ ಬಂಗಾಳದ ಅರಿಪೂರ್ ಕೋರ್ಟ್ ಬಂಧನದ ಆದೇಶ ಹೊರಡಿಸಿದೆ. 15 ದಿನಗಳೊಳಗೆ ಶರಣಾಗುವಂತೆ ಶಮಿ ವಿರುದ್ಧ ಬಂಧನದ ಆದೇಶವನ್ನು ಹೊರಡಿಸಲಾಗಿದೆ. ಇನ್ನೊಂದೆಡೆ ಶಮಿ ಪ್ರಕರಣದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಯಾವ ನಡೆ ಸ್ವೀಕರಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಆರೋಪ ಪಟ್ಟಿ ಕೂಲಂಕುಷವಾಗಿ ಪರಿಶೀಲಿಸಿದ ಬಳಿಕವಷ್ಟೇ ಕ್ರಮ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ. 2018ರಲ್ಲಿ ಆರೋಪದಲ್ಲಿ ಶಮಿ ಹಾಗೂ ಆತನ ಸೋದರ ಹಸೀದ್ ಅಹ್ಮದ್ ವಿರುದ್ಧ ಶಮಿ ಪತ್ನಿ ದೂರು ದಾಖಲಿಸಿದ್ದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2PAj1Mw