ICUನಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದವಳನ್ನು ಬಿಡಲಿಲ್ಲ Ward Boy

ಹೈದರಾಬಾದ್: ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ವರ್ಷದ ಮಹಿಳೆಯ ಮೇಲೆ 50 ವರ್ಷದ ಲೈಂಗಿಕ ದೌರ್ಜನ್ಯ ನಡೆಸಿದ ಹೇಯ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಆಗಸ್ಟ್ 26ರಂದು ಈ ಕೃತ್ಯವನ್ನೆಸಲಾಗಿತ್ತು. ಆದರೆ ಮಹಿಳೆಯ ಆರೋಗ್ಯ ಸುಧಾರಿಸಿ ತೀವ್ರ ನಿಗಾ ಘಟಕದಿಂದ ಹೊರ ಬಂದ ಬಳಿಕವಷ್ಟೇ ಈ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಆಕೆಯ ಪೋಷಕರು ಬಂಜಾರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪ್ರಸವದ ಸಮಯದಲ್ಲಿ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದರಿಂದ ವೆಂಟಿಲೇಟರ್‌ನಲ್ಲಿಡಲಾಗಿತ್ತು. ಐಸಿಯುನಲ್ಲಿದ್ದ ಆಕೆಯ ಮೇಲೆ ಆರೋಪಿ ಅಚ್ಚುತ್ ರಾವ್ ಲೈಂಗಿಕ ದೌರ್ಜನ್ಯವೆಸಗಿದ್ದ, ಎಂದು ದೂರಿನಲ್ಲಿ ಹೇಳಲಾಗಿದೆ ಎಂದು ಬಂಜಾರಾ ಹಿಲ್ಸ್ ಠಾಣೆಯ ಸರ್ಕಲ್ ಇನ್ಸಪೆಕ್ಟರ್ ಕಾಳಿಂಗ ರಾವ್ ತಿಳಿಸಿದ್ದಾರೆ. ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


from India & World News in Kannada | VK Polls https://ift.tt/2ZtFTSB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...