ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ : 10 ಗ್ರಾಂ ಆಭರಣ ಚಿನ್ನಕ್ಕೆ 35,700ರೂ.

ಬೆಂಗಳೂರು: ಸೆಪ್ಟೆಂಬರ್‌ ತಿಂಗಳಾಂತ್ಯದಲ್ಲಿ ಚಿನ್ನದ ದರದಲ್ಲಿ ಸ್ವಲ್ಪ ಇಳಿಮುಖವಾಗಿತ್ತು. ಇದೀಗ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ದೈನಂದಿನ ಬೆಲೆ ಏರಿಕೆ ಪ್ರಕ್ರಿಯೆಯಲ್ಲಿ ಇಂದು (ಶನಿವಾರ ) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಆಭರಣ ಚಿನ್ನದ ಬೆಲೆ 35,700ರೂ. ಮತ್ತು ಒಂದು ಕೆ.ಜಿ. ಬೆಳ್ಳಿ ದರ 46000 ರೂಪಾಯಿ ಇದೆ. ನಿನ್ನೆಯ (ಶುಕ್ರವಾರದ) ದರಕ್ಕೆ ಹೋಲಿಸಿದರೆ, ಚಿನ್ನದ ದರದಲ್ಲಿ 50 ರೂಪಾಯಿ ಏರಿಕೆಯಾಗಿದೆ ಮತ್ತು ಬೆಳ್ಳಿ ಬೆಲೆಯಲ್ಲಿ ಗುರುವಾರ 2350 ರೂಪಾಯಿ ಇಳಿಕೆಯಾಗಿದ್ದು, ಶುಕ್ರವಾರದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಷ್ಟ್ರ ರಾಜಧಾನಿ ದಿಲ್ಲಿ ಹಾಗೂ ಮುಂಬಯಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 37,100 ರೂಪಾಯಿ ಮತ್ತು ಒಂದು ಕೆ.ಜಿ. ಬೆಳ್ಳಿ ದರ 46000 ರೂಪಾಯಿ ಇದೆ. ನಿನ್ನೆಯ ದರಕ್ಕೆ ಹೋಲಿಸಿದರೆ, ದಿಲ್ಲಿಯಲ್ಲಿ 50 ರೂಪಾಯಿ ಇಳಿಕೆಯಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ 10 ಗ್ರಾಂ ಆಭರರಣ ಚಿನ್ನದ ಬೆಲೆ 37,480 ರೂಪಾಯಿ ಮತ್ತು ಬೆಳ್ಳಿ ದರ 46,000 ರೂಪಾಯಿ ಇದೆ. ನಿನ್ನೆಯ ದರಕ್ಕೆ ಹೋಲಿಸಿದರೆ ಚಿನ್ನದ ದರ 180 ರೂಪಾಯಿ ಏರಿಕೆಯಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ 36360 ರೂಪಾಯಿ ಇದ್ದರೆ, ಒಂದು ಕೆ.ಜಿ. ಬೆಳ್ಳಿ ದರ 46,000ರೂಪಾಯಿ ಇದೆ. ನಿನ್ನೆಯ ದರಕ್ಕೆ ಹೋಲಿಸಿದರೆ, ಚಿನ್ನದ ದರ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಸ್ವಲ್ಪ ವ್ಯತ್ಯಾಸವಿದ್ದರೆ, ಬೆಳ್ಳಿ ದರ ಒಂದೇ ರೀತಿಯಾಗಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.


from India & World News in Kannada | VK Polls https://ift.tt/2ALJJaF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...