
ಹೊಸದಿಲ್ಲಿ: ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150 ಜನ್ಮದಿನೋತ್ಸವ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 115ನೇ ಜನ್ಮದಿನ ಆಚರಿಸಲಾಗುತ್ತಿದೆ. ಈಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ, ಪ್ರಧಾನಿ , ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ದೇಶದ ಗಣ್ಯರು ದೆಹಲಿಯ ರಾಜ್‌ಘಾಟ್‌ನಲ್ಲಿ ಗಾಂಧಿ ಸ್ಮಾರಕ ಹಾಗೂ ದೆಹಲಿಯ ವಿಜಯ್‌ಘಾಟ್‌ನಲ್ಲಿರುವ ಶಾಸ್ತ್ರಿ ಸ್ಮಾರಕಕ್ಕೆ ನಮನ ಸಲ್ಲಿಸಿದ್ದಾರೆ. ಪ್ರೀತಿಯ ಬಾಪು ನಿಮ್ಮ 150ನೇ ಜನ್ಮದಿದಂದು ಮಾನವ ಕುಲಕ್ಕೆ ನೀವು ನೀಡಿರುವ ಕೊಡುಗೆಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ಉತ್ತಮ ಪ್ರಪಂಚ ನಿರ್ಮಾಣದ ನಿಮ್ಮ ಕನಸನ್ನು ಸಾಕಾರಗೊಳಿಸುವತ್ತ ಶಮ್ರ ಹಾಕುವುದನ್ನು ಮುಂದುವರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಸಬರಮತಿ ಆಶ್ರಮಕ್ಕೆ ತೆರಳಿದ್ದು, ಅಲ್ಲಿ ನಡೆಯುವ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಜಯ್‌ಘಾಟ್‌ನಲ್ಲಿರುವ ಲಾಲ್ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.
from India & World News in Kannada | VK Polls https://ift.tt/2nwqHCt