2019ರ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ : 64 ಗಣ್ಯರಿಗೆ ಪುರಸ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 2019ರ ರಾಜ್ಯೋತ್ಸ ಪ್ರಶಸ್ತಿ ಪುರಸ್ಕೃತ ಪಟ್ಟಿ ಪ್ರಕಟಿಸಿದೆ. ಈ ಬಾರಿ ರಾಜ್ಯ ಸರ್ಕಾರ ಕನ್ನಡ ನಾಡು ನುಡಿಗಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಒಟ್ಟು 64 ಗಣ್ಯರಿಗೆ ಪ್ರಶಸ್ತಿನೀಡಿ ಗೌರವಿಸಲಿದೆ. ಶಿಕ್ಷಣ ತಜ್ಞ ಗುರುರಾಜ ಕರಜಗಿ, ಸಾಹಿತಿ ಡಾ. ಮಂಜಪ್ಪ ಶಿಟ್ಟಿ ಮಸಗಲಿ, ಹಿರಿಯ ಪತ್ರಕರ್ತ ಬಿ.ವಿ. ಮಲ್ಲಿಕಾರ್ಜಿನಯ್ಯ ಸೇರಿದಂತೆ ಹಲವಾರು ಗಣ್ಯರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಗೆ ಒಟ್ಟು 1,500ಕ್ಕೂ ಹೆಚ್ಚು ಅರ್ಜಿಗಳು ಸಂದಾಯವಾಗಿದ್ದವು . ಸಚಿವ ಸಿ.ಟಿ.ರವಿ ನೇತೃತ್ವದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಈ 64 ಗಣ್ಯರನ್ನು ಆಯ್ಕೆ ಮಾಡಿದೆ. ನವೆಂಬರ್ 1ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2018ರಲ್ಲಿ 63 ಗಣ್ಯರಿಗೆ ಪಶಸ್ತಿ ನೀಡಿ ಗೌರವಿಸಲಾಗಿತ್ತು. ನ್ಯಾ. ನಾಗಮೋಹನ್‌ದಾಸ್‌ ಸಮಿತಿ ವರದಿ ಆಧಾರದಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಸಿದ್ಧಪಡಿಸಲಾಗಿದೆ. ಸಮಿತಿಯ ಶಿಫಾರಸಿನಂತೆ ಕನ್ನಡ ರಾಜ್ಯೋತ್ಸವ ಆಚರಿಸುವ ವರ್ಷದಷ್ಟೇ ಸಂಖ್ಯೆಯ ಪ್ರಶಸ್ತಿ ನೀಡುವುದು ಹಾಗೂ 60 ವರ್ಷ ಮೀರಿದವರಿಗೆ ನೀಡಬೇಕೆಂಬ ನಿಯಮವನ್ನು ಪಾಲಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆಯುವಂತೆ ಮುತುವರ್ಜಿ ವಹಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಸರ್ಕಾರದ ವತಿಯಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸುತ್ತದೆ. (ಪರಿಷ್ಕರಿಸಲಾಗುತ್ತಿದೆ)


from India & World News in Kannada | VK Polls https://ift.tt/2q1T4cc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...