ರೋಹಿತ್, ಧೋನಿ ಹಿಂದಿಕ್ಕಿ ಅಪೂರ್ವ ಟಿ20 ದಾಖಲೆ ಬರೆದ ಹರ್ಮನ್‌ಪ್ರೀತ್ ಕೌರ್

ಸೂರತ್: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಅವರ 100ನೇ ಟಿ20 ಪಂದ್ಯದಲ್ಲಿ ಭಾರತ ಸರಣಿ ಗೆಲುವಿನ ಸಿಹಿ ಅನುಭವಿಸಿದೆ. ಆದರೂ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆದ ಕೊನೆಯ ಟಿ20 ಪಂದ್ಯದಲ್ಲಿ ಸೋಲಿಗೆ ಶರಣಾಗಿದೆ. ಈ ಸೋಲಿನ ಹೊರತಾಗಿಯೂ ಆರು ಪಂದ್ಯಗಳ ಟಿ20 ಸರಣಿಯನ್ನು 3-1ರ ಅಂತರದಲ್ಲಿ ವಶಪಡಿಸಿಕೊಂಡಿದೆ. ಎರಡು ಪಂದ್ಯಗಳು ಮಳೆಯಿಂದಾಗಿ ರದ್ದುಗೊಂಡಿತ್ತು. ಇದರೊಂದಿಗೆ 100 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಭಾರತದ ಮೊದಲ ಆಟಗಾರ್ತಿ (ಪುರುಷ ಟಿ20ಐ ಸೇರಿದಂತೆ) ಎಂಬ ಹಿರಿಮೆಗೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾತ್ರವಾಗಿದ್ದಾರೆ. ಹಾಗೆಯೇ ವಿಶ್ವ ಕ್ರಿಕೆಟ್‌ನಲ್ಲಿ ಈ ಮೈಲುಗಲ್ಲು ತಲುಪಿದ 10ನೇ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರವಾಗಿದ್ದಾರೆ. ಪುರುಷ ಅಂತಾರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರೋಹಿತ್ ಶರ್ಮಾ ತಲಾ 98 ಪಂದ್ಯಗಳನ್ನು ಆಡಿದ್ದಾರೆ. ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಮಹಿಳಾ ತಂಡವು ಆರಂಭಿಕ ಆಟಗಾರ್ತಿಯರಾದ ಲಿಜೆಲ್ ಲೀ ಹಾಗೂ ನಾಯಕಿ ಸನ್ ಲ್ಯೂಸ್ ಬಿರುಸಿನ ಅರ್ಧಶತಕಗಳ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 175 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಇವರಿಬ್ಬರು ಮೊದಲ ವಿಕೆಟ್‌ಗೆ 144 ರನ್‌ಗಳ ಜತೆಯಾಟ ನೀಡಿದ್ದರು. ಲೀ 84 ಹಾಗೂ ಸನ್ 62 ರನ್ ಗಳಿಸಿ ಮಿಂಚಿದರು. ಬಳಿಕ ಗುರಿ ಬೆನ್ನಟ್ಟಿದ ಭಾರತೀಯ ಮಹಿಳಾ ತಂಡವು 17.3 ಓವರ್‌ಗಳಲ್ಲಿ ಕೇವಲ 70 ರನ್‌ಗಳಿಗೆ ಸರ್ವಪತನವನ್ನು ಕಂಡಿತು. ಈ ಮೂಲಕ 105 ರನ್‌ಗಳ ಹೀನಾಯ ಸೋಲಿಗೊಳಗಾಯಿತು. 100ನೇ ಟಿ20 ಪಂದ್ಯದಲ್ಲಿ ಹರ್ಮನ್ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು. ಇತ್ತಂಡಗಳು ಇದೀಗ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ. ಭಾರತದ ಅತಿ ಹೆಚ್ಚು T20I ಪಂದ್ಯ ಆಡಿರುವ ಮಹಿಳಾ ಆಟಗಾರ್ತಿಯರು: 100 ಹರ್ಮನ್‌ಪ್ರೀತ್ ಕೌರ್ 89 ಮಿಥಾಲಿ ರಾಜ್ 68 ಜೂಲನ್ ಗೋಸ್ವಾಮಿ 63 ವೇದಾ ಕೃಷ್ಣಮೂರ್ತಿ


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/30LBuWW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...