ಪ್ರಹ್ಲಾದ್‌ ಜೋಶಿ ತರಾಟೆಗೆ ವೇದಿಕೆಯಲ್ಲೇ ಕಣ್ಣೀರು ಹಾಕಿದ ಧಾರವಾಡ ಡಿಸಿ

ಹುಬ್ಬಳ್ಳಿ: ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ದೀಪಾ ಚೋಳನ್ ವೇದಿಕೆಯಲ್ಲೇ ಕಣ್ಣೀರು ಹಾಕಿದ ಘಟನೆ ವರದಿಯಾಗಿದೆ. ಇಲ್ಲಿನ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಹಾಗೂ ಬೃಹತ್ ಪ್ಲಾಸ್ಟಿಕ್ ಸಂಗ್ರಹಣಾ ಅಭಿಯಾನ‌ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮ ಆಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ‌ ದೀಪಾ ಚೋಳನ್ ಅವರನ್ನು ಸಂಸದ ಪ್ರಹ್ಲಾದ್ ಜೋಶಿ ಸಭೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದರು. ಏಕಾಏಕಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಜಿಲ್ಲಾಧಿಕಾರಿ ಸಮಜಾಯಿಸಿ ನೀಡಲು ‌ಅವಕಾಶ ನೀಡದೆ ಬೈಯುತ್ತಲೇ ಇದ್ದರು. ಇಷ್ಟಲ್ಲದೆ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರನ್ನೂ ಕರೆಸಿ ಜೋಶಿ ಕ್ಲಾಸ್‌ ತೆಗೆದುಕೊಂಡರು. ಸಾರ್ವಜನಿಕ ಸಭೆಯಲ್ಲಿಯೇ ಕೇಂದ್ರ ಸಚಿವರಿಂದ ‌ಬೈಗುಳ ತಿಂದ ಜಿಲ್ಲಾಧಿಕಾರಿ ಕಣ್ಣೀರು ಹಾಕಿದ್ದು ಕಂಡು ಬಂತು. ಇಷ್ಟೆಲ್ಲಾ ನಡೆಯುತ್ತಿದ್ದರೂ ಬೃಹತ್ ಹಾಗೂ ಮಧ್ಯಮ ‌ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತ್ರ ಎಲ್ಲವನ್ನೂ ನೋಡುತ್ತಾ ಇಬ್ಬರ ಮಧ್ಯದಲ್ಲಿ ಕುಳಿತಿದ್ದರು.


from India & World News in Kannada | VK Polls https://ift.tt/2mQf0pD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...