ವಿವಾಹಕ್ಕೆ ಪೋಷಕರ ವಿರೋಧ: ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ

ಚಿಕ್ಕಮಗಳೂರು: ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ. ನೂತನ್ (25) ಅಪೂರ್ವ (22) ಸಾವಿಗೆ ಶರಣಾದ ಪ್ರೇಮಿಗಳು. ನೂತನ್ ಹಾಗೂ ಅಪೂರ್ವ ಪರಸ್ಪರ ಪ್ರೀತಿಸುತ್ತಿದ್ದು, ಇವರ ವಿವಾಹಕ್ಕೆ ಪೋಷಕರ ವಿರೋಧವಿತ್ತು. ಹೀಗಾಗಿ ಮನನೊಂದಿದ್ದ ಅವರು ಮದುವೆ ಮಾಡಿಕೊಂಡು ಬಳಿಕ ವಿಷ ಸೇವಿಸಿದ್ದರು. ಇವರಿಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಇಂದು (ಬುಧವಾರ) ಇಬ್ಬರೂ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮೂಡಿಗೆರಿ ಪಟ್ಟಣದ ಗೋಣಿಬೀಡು ಹಾಗೂ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/2ojQYnn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...