ಬಿಜೆಪಿ ಸಂಸದರು ಪೇಪರ್ ಹುಲಿಗಳು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬೆಂಗಳೂರು: ನೆರೆ ಪರಿಹಾರ ವಿಚಾರವಾಗಿ ಕರ್ನಾಟಕವನ್ನು ಕೇಂದ್ರ ಸರಕಾರ ಕಡೆಗಣಿಸುತ್ತಿರುವುದು ಸದ್ಯ ರಾಜ್ಯದ ಹಾಟ್ ಟಾಪಿಕ್ ಎನಿಸಿದೆ. ಉಭಯ ಕಡೆಗಳಲ್ಲಿ ಸರಕಾರ ಅಧಿಕಾರದಲ್ಲಿದ್ದರೂ ಕೇಂದ್ರವೇಕೆ ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ವಿಚಾರವಾಗಿ ವಿರೋಧ ಪಕ್ಷಗಳು ರಾಜ್ಯ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಹಾರ ಮಾಡುತ್ತಿದೆ. ಇದೀಗ ನೆರೆ ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಮಾಜಿ ಸಚಿವ ಬಿಜೆಪಿ ಸಂಸದರ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, "ನೆರೆಯಿಂದ ನೊಂದಿರುವ ಕರ್ನಾಟಕದ ರೈತರಿಗೆ ಪರಿಹಾರ ಕೊಡಿಸುವಲ್ಲಿ ವಿಫಲರಾಗಿರುವ ರಾಜ್ಯದ ಸಂಸದರು ಪೇಪರ್ ಹುಲಿಗಳು, ಪ್ರಧಾನಿ ನರೇಂದ್ರ ಮೋದಿ ಬಳಿ ಪರಿಹಾರ ಕೇಳಲು ಹೆದರುತ್ತಿರುವುದು ಏಕೆ? ಇನ್ನೆಷ್ಟು ಜೀವಗಳು ರಾಜ್ಯದಲ್ಲಿ ಬಲಿಯಾಗಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


from India & World News in Kannada | VK Polls https://ift.tt/2VbY9Ky

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...