ಮಂಡ್ಯದಲ್ಲಿ ಅನುಮಾನಸ್ಪದವಾಗಿ ಪರೇಡ್‌ ನಡೆಸುತ್ತಿದ್ದ ಪಿಎಫ್‌ಐ ಕಾರ್ಯಕರ್ತರ ಬಂಧನ

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಅಲಂಬಾಡಿ ಕಾವಲ್ ಗ್ರಾಮದ ಹೊರವಲಯದ ಕಬ್ಬಿನಗದ್ದೆ ಬಳಿ ಪೆರೇಡ್ ಮಾಡುತ್ತಿದ್ದ ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯ 15 ಕಾರ್ಯಕರ್ತರನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರದ ಹಲವೆಡೆ ಸಂಘಟನೆಯನ್ನು ಉಗ್ರ ಸಂಘಟನೆಯೆಂದು ಗುರುತಿಸಿ ನಿಷೇಧ ಹೇರಲಾಗಿದೆ. ಕೆ.ಆರ್.ಪೇಟೆ ಪಟ್ಟಣದ ಶಫೀವುಲ್ಲಾ ಸೇರಿದಂತೆ ಪಿಎಫ್ಐ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 117 ಮತ್ತು 153 ಪ್ರಕಾರ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ತಿಳಿಸಿದ್ದಾರೆ. ವಿಚಾರಣೆಗೆ ಒಳಪಟ್ಟಿರುವ ಶಫೀವುಲ್ಲಾ ಕಿಕ್ಕೇರಿ ರಸ್ತೆಯಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದಾರೆ. ಪಿಎಫ್‌ಐ ಕಾರ್ಯಕರ್ತರು ಬಹಿರಂಗವಾಗಿಯೇ ಪೆರೇಡ್ ಮಾಡಬಹುದಿತ್ತು. ಆದರೆ, ರಿಮೋಟ್ ಏರಿಯಾದಲ್ಲಿ ಅವರು ಅನುಮಾನಾಸ್ಪದವಾಗಿ ಪೆರೇಡ್ ಮಾಡುತ್ತಿದ್ದುದು ಸಾಕಷ್ಟು ಗುಮಾನಿಗೆ ಕಾರಣವಾಗಿದೆ. ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು 'ವಿಜಯ ಕರ್ನಾಟಕ'ಕ್ಕೆ ಪರಶುರಾಮ್‌ ಸ್ಪಷ್ಟಪಡಿಸಿದ್ದಾರೆ. ಬಂಧಿತರೆಲ್ಲರೂ ಕೆ.ಆರ್.ಪೇಟೆ ಮತ್ತು ಆಲಂಬಾಡಿ ಕಾವಲು ಗ್ರಾಮದವರಾಗಿದ್ದಾರೆ.


from India & World News in Kannada | VK Polls https://ift.tt/31Ow4Li

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...