ಫ್ರೆಂಚ್ ಓಪನ್; ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಸಾತ್ವಿಕ್-ಚಿರಾಗ್ ಜೋಡಿ

ಪ್ಯಾರಿಸ್: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಭಾರತದ ಡಬಲ್ಸ್ ತಾರೆಗಳಾದ ಮತ್ತು ಜೋಡಿಯು ಸೆಮಿಫೈನಲ್ ಹಂತಕ್ಕೆ ಲಗ್ಗೆಯಿಟ್ಟಿದ್ದಾರೆ. ಶುಕ್ರವಾರ ನಡೆದ ಪುರುಷ ಡಬಲ್ಸ್ ಕ್ವಾರ್ಟರ್ ಫೈನಲ್ ಮುಖಾಮುಖಿಯಲ್ಲಿ ಸಾತ್ವಿಕ್-ಚಿರಾಗ್ ಜೋಡಿಯು ಡೆನ್ಮಾರ್ಕ್‌ನ ಕಿಮ್ ಆಸ್ಟ್ರಪ್ ಹಾಗೂ ಆಂಡೆರ್ಸ್ ಸ್ಕರೂಪ್ ರಾಸ್ಮುಸ್ಸೆನ್ ವಿರುದ್ಧ 21-13, 22-20ರ ಅಂತರದಿಂದ ಗೆಲುವು ದಾಖಲಿಸಿದರು. ಎದುರಾಳಿಯ ಮೇಲೆ ಸಂಪೂರ್ಣ ಹಿಡಿತವನ್ನು ಸಾಧಿಸಿದ ಸಾತ್ವಿಕ್-ಚಿರಾಗ್ ಜೋಡಿ ಮೊದಲ ಸೆಟ್ ಸುಲಭವಾಗಿ ವಶಪಡಿಸಿಕೊಂಡರು. ದ್ವಿತೀಯ ಸೆಟ್‌ನಲ್ಲಿ ನಿಕಟ ಪೈಪೋಟಿ ಎದುರಾದರೂ ಪರಿಣಾಮಕಾರಿ ಆಟದ ಮೂಲಕ ಪಂದ್ಯ ಗೆದ್ದರು. ಈ ಮಧ್ಯೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸೋಲಿನ ಕಹಿ ಅನುಭವಿಸಿರುವ ಹಿರಿಯ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್, ಕೂಟದಿಂದಲೇ ನಿರ್ಗಮಿಸಿದರು. ಕೊರಿಯಾದ ಆನ್ ಸೇ ಯಂಗ್ ವಿರುದ್ಧ 20-22, 21-23ರ ಅಂತರದಲ್ಲಿ ಸೈನಾ ಸೋತು ನಿರಾಸೆ ಅನುಭವಿಸಿದರು. ಬಿಡಬ್ಲ್ಯು ಸೂಪರ್ 750 ಟೂರ್ನಿಯಲ್ಲಿ ಮೂರು ಬಾರಿಯ ವಿಶ್ವ ಚಾಂಪಿಯನ್ ಡೆನ್ಮಾರ್ಕ್ ಜೋಡಿಯನ್ನು ಮಣಿಸಿ ಗೆಲುವಿನ ನಗೆ ಬೀರಿದರು. ಕಳೆದ ವರ್ಷ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಯು ಬೆಳ್ಳಿ ಪದಕವನ್ನು ಸಾಧನೆ ಮಾಡಿದ್ದರು. ಬಳಿಕ 2019ರಲ್ಲಿ ಥಾಯ್ಲಂಡ್ ಓಪನ್‌ ಸೂಪರ್ 500 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಆಲಂಕರಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/32PSTiO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...