ಜಿಲ್ಲೆಗೆ ಆಗ್ರಹಿಸಿ ಜಮಖಂಡಿ ಬಂದ್: ಶಾಲಾ ಕಾಲೇಜುಗಳಿಗೆ ರಜೆ, ಸಾರಿಗೆ ಸಂಚಾರ ಅಸ್ತವ್ಯಸ್ತ

ಬಾಗಲಕೋಟ: ಜಮಖಂಡಿ ನಗರವನ್ನು ಜಿಲ್ಲೆಯನ್ನಾಗಿ ಮತ್ತು ಸಾವಳಗಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು (ಗುರುವಾರ) ಕರೆ ನೀಡಲಾಗಿದ್ದ ಜಮಖಂಡಿ ಬಂದ್‌ ಬಹುತೇಕ ಯಶಸ್ವಿಯಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ, ಮುಗ್ಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸರಕಾರಿ ಕಚೇರಿಗಳಲ್ಲಿ ಎಂದಿನಂತೆ ಕೆಲಸ ನಡೆಯುತ್ತಿದೆ. ಜಮಖಂಡಿಯಿಂದ ತೆರಳುವ ಸರಕಾರಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅಲ್ಲಲ್ಲಿ ಖಾಸಗಿ ವಾಹನಗಳ ಸಂಚಾರ ಕಂಡು ಬರುತ್ತಿದೆ. ಇಂದು ಮಧ್ಯಾಹ್ನ ವಿವಿಧ ಸಂಘಟನೆ ಹಾಗೂ ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಮುಂಜಾಗೃತ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಮಖಂಡಿಯನ್ನು ಜಿಲ್ಲೆ ಮತ್ತು ಸಾವಳಗಿಯನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯಿಸಿ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಗುರುವಾರ ಜಮಖಂಡಿ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಓಲೇಮಠದ ಡಾ. ಚನ್ನಬಸವ ಮಹಾಸ್ವಾಮಿಗಳು ತಿಳಿಸಿದ್ದಾರೆ.


from India & World News in Kannada | VK Polls https://ift.tt/2nRMbtH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...