ಬೆಳಗಾವಿ: ವಿಚಾರವಾಗಿ ರಾಜ್ಯ ಸರಕಾರ ಸಲ್ಲಿಸಿರುವ ವರದಿಯನ್ನು ತಿರಸ್ಕೃರಿಸಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂಬಂಧ ರಾಜ್ಯ ಸರಕಾರದ ಪ್ರಸ್ತಾಪ ಹಾಗೂ ಕೇಂದ್ರ ತಂಡದ ವರದಿಗೆ ಹೊಂದಾಣಿಕೆ ಆಗುತ್ತಿಲ್ಲ. ಹೀಗಾಗಿ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರಕಾರ ಹೇಳಿದೆ. ವರದಿಯನ್ನು ತಿರಸ್ಕರಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರಕಾರ ರಾಜ್ಯ ಸರಕಾರದ ವರದಿ ತಿರಸ್ಕರಿಸಿದೆ ಎನ್ನುವುದು ಶುದ್ಧ ಸುಳ್ಳು. ಈಗಾಗಲೇ ಕೇಂದ್ರದ ಎಲ್ಲ ಸಚಿವರ ಜತೆ ಮಾತನಾಡಿದ್ದೇನೆ. ಮೂರು ನಾಲ್ಕು ದಿನಗಳಲ್ಲಿ ನೆರೆ ಪರಿಹಾರ ಹಣ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು. ಇಲ್ಲಿಯವರೆಗೂ ಯಾವುದೇ ಪ್ರವಾಹ ಪೀಡಿತ ರಾಜ್ಯಗಳಿಗೆ ಪರಿಹಾರ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಹೆಚ್ಚಿನ ಪ್ರವಾಹ ಬಿಡುಗಡೆ ಆಗುವ ವಿಶ್ವಾಸ ಇದೆ ಎಂದರು. ರಾಜ್ಯ ಸರಕಾರದ ಬೊಕ್ಕಸ ಖಾಲಿ ಆಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ಇಷ್ಟೊಂದು ಹಣ ನೀಡಲು ಸಾಧ್ಯವಾಗುತ್ತಿರಲಿಲ್ಲ. ಮುಂದಿನ ಬಜೆಟ್‌ನಲ್ಲಿ ಪ್ರವಾಹ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ ಎಂದು ತಿಳಿಸಿದರು.
from India & World News in Kannada | VK Polls https://ift.tt/2VbY89s