ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಮಯಾಂಕ್ ಅಗರ್ವಾಲ್

ವಿಶಾಖಪಟ್ಟಣ: ಭಾರತ ಕ್ರಿಕೆಟ್ ತಂಡದ ಯುವ ಭರವಸೆಯ ಆರಂಭಿಕ ಬ್ಯಾಟ್ಸ್‌ಮನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ. ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮಯಾಂಕ್, ನೂತನ ಮೈಲುಗಲ್ಲನ್ನು ತಲುಪಿದರು. 202/0 ಎಂಬಲ್ಲಿದ್ದ ದಿನದಾಟ ಆರಂಭಿಸಿದ ಭಾರತಕ್ಕೆ ರೋಹಿತ್ ಶರ್ಮಾ ಹಾಗೂ ಮಯಾಂಕ್ ಅಗರ್ವಾಲ್ ಉತ್ತಮ ಆರಂಭವೊದಗಿಸಿದರು. ಈ ಪೈಕಿ ಮೊದಲ ದಿನದಾಟದಲ್ಲಿ 84 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಕರ್ನಾಟಕದ ಮಯಾಂಕ್, ಎರಡನೇ ದಿನದಾಟದಲ್ಲೂ ಉತ್ತಮ ಲಯ ಕಂಡುಕೊಂಡರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದರು. ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಮಯಾಂಕ್ ಅಗರ್ವಾಲ್ ತಮ್ಮ ಐದನೇ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ. ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಭಾರತದ 86ನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2n5LBrD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...