ಡಿಕೆಶಿ ಕುರಿತ ಹೇಳಿಕೆ ವಿಡಿಯೋ ವೈರಲ್‌: ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಏನು ಗೊತ್ತಾ?

ಬೆಂಗಳೂರು: ಹೊಸದಿಲ್ಲಿಯಿಂದ ಆಗಮಿಸಿದಾಗ ನೀಡಲಾದ ಬೃಹತ್‌ ಸ್ವಾಗತ ಹಾಗೂ ಮೆರವಣಿಗೆ ವೇಳೆ ಜೆಡಿಎಸ್‌ ಬಾವುಟ ಹಿಡಿದಿರುವ ಕುರಿತು ಮಾಜಿ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ವೈರಲ್ ಆಗಿದೆ. ಈ ಕುರಿತು ಸಿದ್ದರಾಮಯ್ಯ ಸ್ಪಷ್ಟನೆ ಕೂಡ ಕೊಟ್ಟಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳ ಮೂಲಕವೇ ಸಿದ್ದರಾಮಯ್ಯ ತಮ್ಮ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜಾತೀವಾದಿ ಎಂದು ಟೀಕಿಸಿದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಇತರೆ ರಾಜಕೀಯ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ನನ್ನ ಜಾತ್ಯತೀಯ ವಿಚಾರಧಾರೆಯನ್ನು ಪ್ರಶ್ನಿಸಲು ಯಾರಿಗೂ ಹಕ್ಕಿಲ್ಲ ಎಂದು ಟ್ವೀಟ್‌ ಮೂಲಕ ಪ್ರತಿಪಾದಿಸಿದ್ದಾರೆ. ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ, ಅಂಬೇಡ್ಕರ್‌, ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡ ಹೌದು ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ. ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು @BJP4Karnataka ನಾಯಕರು ಪ್ರಚಾರ ಮಾಡುತ್ತಾ ವಿಕೃತಾನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ. #ಸತ್ಯಮೇವಜಯತೆ ಎಂದೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.


from India & World News in Kannada | VK Polls https://ift.tt/2JspJia

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...