ಬೆಂಗಳೂರು: ಅವರ 150 ಜನ್ಮದಿನೋತ್ಸವ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 115ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಬ್ಬರು ಗಣ್ಯರಿಗೂ ನಮನ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಅವರು ವಿಧಾನಸೌಧ- ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ವಿಶ್ವನಾಥ, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಅಶೋಕ್ ಹಾಗು ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು
from India & World News in Kannada | VK Polls https://ift.tt/2pgcolV