ಬೆಂಗಳೂರು: ಕೋಡಿ ಒಡೆದು ನೂರಾರು ಮನೆಗಳು ಜಲಾವೃತಗೊಂಡಿದ್ದವು. ಈ ಸಂಬಂಧ ಲೋಕಾಯುಕ್ತರು ಡಿಸೆಂಬರ್ 10ರೊಳಗೆ ವರದಿ ನೀಡಲು ಆದೇಶಿಸಿದ್ದಾರೆ. ಹುಳಿಮಾವು ಕೆರೆಯ ಪುನರುಜ್ಜೀವನಕ್ಕಾಗಿ ಶ್ರೀ ದೊರೆಸ್ವಾಮಿಯವರ ನೇತ್ವತ್ವದಲ್ಲಿ ಸಲ್ಲಿಸಿದ್ದ ದೂರಿನ ಮೇಲೆ ಹುಳಿಮಾವು ಕೆರೆಯನ್ನು ಪರಿಶೀಲಿಸಿದ ಲೋಕಾಯುಕ್ತರು ಘಟನೆ ಸಂಬಂಧ ಕ್ರಮ ಕೈಗೊಂಡು ವರದಿ ನೀಡಲು ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೆ 2 ವಾರಗಳ ಗಡುವು ನೀಡಿ ಆದೇಶಿಸಿದ್ದಾರೆ. ನಿಮ್ಮ ಕೆಲಸ ನೀವು ಸರಿಯಾಗಿ ಮಾಡದಿದ್ದರೆ ನನ್ನ ಕೆಲಸವನ್ನು ನಾನು ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸುದ್ದಿ ಓದಿ: ಪ್ರಕರಣದ ತನಿಖೆ ನಡೆಸುವಂತೆ ಬಿಬಿಎಂಪಿಗೆ ನೋಟಿಸ್ ನೀಡಿದ್ದೇನೆ. ಈವರೆಗೆ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ತನಿಖೆಯ ನಂತರ ತಪ್ಪಿತಸ್ಥರ ಪತ್ತೆಯಾಗಲಿದೆ. ಅವಘಡಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದರು. ಇದನ್ನೂ ಓದಿ: ಇನ್ನು, ಪರಿಹಾರ ಕಾರ್ಯ ಚುರುಕುಗೊಳಿಸಬೇಕು. ಶಾಲೆಗೆ ಹೋಗಲು ಮಕ್ಕಳಿಗೆ ತೊಂದರೆ ಆಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ನಿಷ್ಪಕ್ಷಪಾತವಾಗಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದೂ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಸೂಚಿಸಿದ್ದಾರೆ. ಇನ್ನು, ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 10ರಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತರ ಮುಂದೆ ನಿಗದಿಪಡಿಸಲಾಗಿದೆ.
from India & World News in Kannada | VK Polls https://ift.tt/37CUMlU