ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಮಧ್ಯಾಹ್ನ 3.30ಕ್ಕೆ ಫಡ್ನವಿಸ್‌ ಸುದ್ದಿಗೋಷ್ಠಿ

ಮುಂಬಯಿ: ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು ಮುಖ್ಯಮಂತ್ರಿ ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ನವೆಂಬರ್‌ 27, ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಲು ಸುಪ್ರೀಂ ಕೋರ್ಟ್‌ ಆದೇಶಿಸಿದ ಹಿನ್ನೆಲೆ ಮಂಗಳವಾರ ರಾತ್ರಿ 9 ಗಂಟೆಗೆ ಬಿಜೆಪಿ ತುರ್ತು ಶಾಸಕಾಂಗ ಸಭೆಯನ್ನು ಕರೆದಿದೆ. ತಮ್ಮ ಪಕ್ಷದ ಶಾಸಕರ ಮೇಲೆ ತೀವ್ರ ನಿಗಾ ಇರಿಸಿಕೊಂಡಿರುವ ಎನ್‌ಸಿಪಿ, ಶಿವಸೇನೆ ಮತ್ತು ಕಾಂಗ್ರೆಸ್‌ ಜಂಟಿಯಾಗಿ 5 ಗಂಟೆಗೆ ಸಭೆ ಕರೆದಿವೆ. ಈ ಸಭೆಯಲ್ಲಿ ಮೈತ್ರಿ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ನಿರ್ಧರಿಸಿವೆ. ಮುಂಬಯಿನ ಸೋಫಿಟಲ್‌ ಹೋಟೆಲ್‌ನಲ್ಲಿ ಶಿವಸೇನೆ ಮತ್ತು ಎನ್‌ಸಿಪಿ ನಾಯಕರು ಸಭೆಯಲ್ಲಿ ನಿರತರಾಗಿದ್ದಾರೆ. ಶರದ್‌ ಪವಾರ್‌, ಪ್ರಫುಲ್‌ ಪಟೇಲ್‌, ಜಯಂತ್‌ ಪಾಟೀಲ್‌ ಸುಪ್ರಿಯಾ ಸುಳೆ, ಛಗನ್‌ ಭುಜಬಲ್‌, ಉದ್ಧವ್‌ ಠಾಕ್ರೆ ಆದಿತ್ಯಾ ಠಾಕ್ರೆ ಮತ್ತು ಸಂಜಯ್‌ ರಾವುತ್‌ ಮತ್ತಿತರು ಇದ್ದಾರೆ. ಬಹುಮತ ಸಾಬೀತು ಪಡಿಸುವುದು ಯಾವುದೋ ಹೋಟೆಲ್‌ ಅಥವಾ ಬೇರೆ ಕಡೆಯಲ್ಲ, ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸಬೇಕು. ನಮ್ಮ ಸರಕಾರಕ್ಕೆ ಬಹುಮತವಿದೆ ಎಂಬುದನ್ನು ಸಾಬೀತು ಪಡಿಸುವ ಭರವಸೆ ನಮಗಿದೆ ಎಂದು ಬಿಜೆಪಿ ನಾಯಕ ರಾಮ ಮಾಧವ್‌ ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಡಿಸಿಎಂ ಅಜಿತ್‌ ಪವಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳಿಂದಾಗಿ ಅಜಿತ್‌ ಪವಾರ್‌ ಉಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಕೊಂಡೆ. ನನಗೆ ಇದರ ಬಗ್ಗೆ ಗೊತ್ತಿಲ್ಲ. ಇದರ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಎನ್‌ಸಿಪಿ ನಾಯಕ ಜಯಂತ್‌ ಪಾಟೀಲ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.


from India & World News in Kannada | VK Polls https://ift.tt/2Oj8Id8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...