ಹೊಸದಿಲ್ಲಿ: ಗೂಡಿನಂತಾಗಿರುವ ದಿಲ್ಲಿಯಲ್ಲಿ ವಾಯುಗುಣಮಟ್ಟ ಸೂಚ್ಯಂಕ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ನೇಮಿಸಿರುವ ಪರಿಸರ ಮಾಲಿನ್ಯ (ನಿಯಂತ್ರಣ ಮತ್ತು ತಡೆ) ಪ್ರಾಧಿಕಾರ (ಇಪಿಸಿಎ) ಪ್ರಕರಣ ದಾಖಲಿಸಿತ್ತು. ನ.4ರಂದು ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಕಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಲಿದೆ. ಏನಿದು ಪ್ರಕರಣ: ದಿಲ್ಲಿಯ ಮಿತಿಮೀರಿದ ವಾಯುಮಾಲಿನ್ಯ ಕುರಿತು ಪರಿಸರ ಮಾಲಿನ್ಯ (ನಿಯಂತ್ರಣ ಮತ್ತು ತಡೆ) ಪ್ರಾಧಿಕಾರ ಸುಪ್ರೀಂ ಕೋರ್ಟ್‌ಗೆ ವರದಿ ನೀಡಿದೆ. ವರದಿಯಲ್ಲಿ ದೆಹಲಿ ವಾಯುಮಾಲಿನ್ಯಕ್ಕೆ ಕಾರಣವಾಗಿರುವ ಪ್ರಮುಖ ಅಂಶಗಳನ್ನು ತಿಳಸಿದೆ. ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದರಿಂದ, ಕೈಗಾರಿಕೆಗಳಿಂದ ಸೂಸುವ ವಿಷಾನಿಲಗಳು, ಹಾಗೂ ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು ಮಾಲಿನ್ಯಕ್ಕೆ ಪ್ರಮುಖ ಕಾರಣ ಎಂದು ತಿಳಿಸಿತ್ತು. ನ್ಯಾಯ ಪೀಠ ಕೃಷಿ ತ್ಯಾಜ್ಯಗಳನ್ನು ಸುಡುತ್ತಿರುವ ಕುರಿತು ವಿಚಾರಣೆ ನಡೆಸಲಿದೆ. ದಿಲ್ಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ: ವಾಯುಮಾಲಿನ್ಯ ಕೈಮೀರಿದ ಹಿನ್ನೆಲೆಯಲ್ಲಿ ಶುಕ್ರವಾರ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ದಿಲ್ಲಿಯ ಶಾಲೆಗಳಿಗೆ ನ.5ರವೆರೆಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಕ್ಕಳು ಮತ್ತು ನಿವಾಸಿಗಳಿಗೆ ಮಾಸ್ಕ್ ಧರಿಸುವಂತೆ ಮನವಿ ಮಾಡಿದ್ದು, 50 ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ್ದಾರೆ. ನವೆಂಬರ್ 5ರವರೆಗೆ ದೆಹಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ನಿರ್ಮಾಣ ಕಾರ್ಯಗಳನ್ನು ಮಾಡದಂತೆ ಆದೇಶಿಸಿದೆ. ಜತೆಗೆ ಚಳಿಗಾಲದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ.
from India & World News in Kannada | VK Polls https://ift.tt/2JJSQgW