ಕ್ರೈಸ್ತ ಧರ್ಮಕ್ಕೆ ಲಂಬಾಣಿ ಸ್ತ್ರೀಯರ ಮತಾಂತರ ಆರೋಪ: ಸಾಮಾಜಿಕ ಕಾರ್ಯಕರ್ತನಿಗೆ ಹಿಗ್ಗಾಮುಗ್ಗ ಥಳಿತ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಮತಾಂತರಕ್ಕೆ ಪ್ರಚೋದಿಸುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಥಳಿಸಿದ್ದಾರೆ. ಲಂಬಾಣಿ ಜನಾಂಗದ ಮಹಿಳೆಯರು ಹಾಗೂ ಕಾಲೇಜು ವಿದ್ಯಾರ್ಥಿನಿಯರನ್ನು ಮತಾಂತರಕ್ಕೆ ಯತ್ನಿಸಲಾಗುತ್ತಿತ್ತು. ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಣದ ಆಮಿಷ ನೀಡುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತನಾಗಿರುವ ತುಕಾರಾಮ್ ಎಂಬಾತನಿಗೆ ಸ್ಥಳೀಯರು ಥಳಿಸಿದ್ದಾರೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 31ರಲ್ಲಿ ಈ ಘಟನೆ ನಡೆದಿದೆ. 35ಕ್ಕೂ ಹೆಚ್ಚು ಮಹಿಳೆಯರು, ಕಾಲೇಜು ವಿದ್ಯಾರ್ಥಿನಿಯರನ್ನು ಒಂದೆಡೆ ಕೋಣೆಯೊಳಗೆ ಸೇರಿಸಿ ಮತಾಂತರಕ್ಕೆ ಪ್ರೇರಣೆ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಆರೋಪಿ ತುಕಾರಾಮ್ ಪ್ರೇರೇಪಿಸುತ್ತಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಮುದಾಯದ ಮುಖಂಡರು ಹಾಗೂ ಪರ ಸಂಘಟನೆ ಮುಖಂಡರು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಕ್ಕೆ ವ್ಯಕ್ತಿಯನ್ನು ಕೊಠಡಿಯಿಂದ ಹೊರಗೆ ಎಳೆದು ತಂದು ಥಳಿಸಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಕಾರಾಮ್‌ಗೆ ಥಳಿಸಿದ ವ್ಯಕ್ತಿ ಯ ವಿರುದ್ಧ ದೂರು ದಾಖಲಿಸಲಾಗಿದೆ. ಮತಾಂತರ ಕುರಿತು ತುಕಾರಾಮ್ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ ಎಂದು ಎಸ್ ಪಿ ಲೋಕೇಶ ಸ್ಪಷ್ಟಪಡಿಸಿದ್ದಾರೆ.


from India & World News in Kannada | VK Polls https://ift.tt/36tjrJ4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...