ಮಹಾರಾಷ್ಟ್ರ : ನಿತಿನ್​ ಗಡ್ಕರಿಯನ್ನು ಭೇಟಿಯಾದ ಕಾಂಗ್ರೆಸ್ ನ ಅಹಮದ್​ ಪಟೇಲ್!

ಮುಂಬೈ: ವಿಚಾರ ದಿನದಿಂದ ದಿನಕ್ಕೆ ರಾಜಕೀಯ ತಿರುವು ಪಡೆಯುತ್ತಲೇ ಇದೆ. ಸರಕಾರ ರಚನೆಗೆ ಇನ್ನೆರಡು ದಿನದ ಕಾಲಾವಕಾಶ ನೀಡಲಾಗಿದ್ದು, ರಾಜಕೀಯ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಈ ನಡುವೆ ಇಂದು ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಅಹಮದ್ ಪಟೇಲ್ ಅವರು ಬಿಜೆಪಿ ನಾಯಕ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್-ಬಿಜೆಪಿ ನಾಯಕರ ಭೇಟಿ ಮಹಾರಾಷ್ಟ್ರ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದು, ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ದೂರವಿರಬೇಕೆಂದು ಗಡ್ಕರಿ ಅವರು ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಗಡ್ಕರಿಯನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲಾಗಿದೆ ಹೊರತು ಮಹಾರಾಷ್ಟ್ರ ಸರಕಾರ ರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಪಟೇಲ್ ಹೇಳಿದ್ದಾರೆ. ಆದರೆ ರಾಜಕೀಯ ವಲಯದಲ್ಲಿ ಮಾತ್ರ ಇಬರಬು ರಾಜಕೀಯ ನಾಯಕರ ಭೇಟಿ ತೀವ್ರ ಚರ್ಚೆಗೆ ಕಾರಣವಾಗಿರುವುದು ಸುಳ್ಳಲ್ಲ.


from India & World News in Kannada | VK Polls https://ift.tt/32m0xR4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...