ಕೊಲ್ಲಿ ದೇಶದಲ್ಲೂ ಮಿನುಗಿದ ಬೆಳಕಿನ ಹಬ್ಬ ದೀಪಾವಳಿ : ಬೃಹತ್‌ ರಂಗೋಲಿಯ ದಾಖಲೆ

ದೋಹಾ, : ಕೊಲ್ಲಿ ದೇಶಗಳಲ್ಲಿ ಆಚರಿಸುವುದು ಹೊಸತೇನಲ್ಲ. ಆದರೆ, ಕತಾರ್ನಲ್ಲಿರುವ ಭಾರತೀಯರು ಈ ಬಾರಿ ದೀಪಾವಳಿ ಆಚರಿಸಿರುವುದು ವಿಶೇಷ. ಅದರಲ್ಲೂ ದೀಪಾವಳಿ ಆಚರಣೆಯಲ್ಲಿ ದಾಖಲೆ ಸೃಷ್ಟಿಸಿರುವುದು ಮತ್ತೊಂದು ವಿಶೇಷ. ಸುಮಾರು 12 ಜನರ ತಂಡವು ಸತತ 3 ದಿನಗಳ ಕಾಲ ಶ್ರಮಪಟ್ಟು, ಬೃಹತ್ ರಂಗೋಲಿ ರಚಿಸುವ ಮೂಲಕ ದಾಖಲೆ ಸೃಷ್ಟಿಸಲಾಗಿದೆ. ಸ್ಥಳೀಯ ಆಕಾಶವಾಣಿ ’ರೇಡಿಯೋ ಆಲಿವ್ 106.3 ಸಂಸ್ಥೆಯ ಸಹಯೋಗದಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಈ ದೊಡ್ಡ ರಂಗೋಲಿ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದ್ದರು. ಕತಾರಿನಲ್ಲಿ ವಾಸವಾಗಿರುವ ಭಾರತೀಯರಿಗೆ ಹಾಗೂ ಇತರೆ ದೇಶದವರ ಸಲುವಾಗಿ ಈ ವಿಶೇಷ ಕಾರ್ಯಕ್ರಮ ಆಯೋಜಿಸಿಸಲಾಗಿತ್ತು. ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸಲು ಹಬ್ಬಗಳ ಆಚರಣೆ ಅತ್ಯಗತ್ಯ. ಕಳೆದ ಅ25ರಿಂದ 27ರವರೆಗೆ ದೋಹಾದಲ್ಲಿರುವ ಮಿರ್ಕಾಬ್ ಮಾಲ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಗಳು, ಮಿಟಾಯಿ ಮಳಿಗೆಗಳು, ಜಾದೂ ಪ್ರದರ್ಶನ ಹಾಗೂ ಉಲ್ಲಾಸಭರಿತ ಚಟುವಟಿಕೆಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದವು. ಭಾಗವಹಿಸಿದವರಿಗೆ ವಿಶೇಷ ಬಹುಮಾನಗಳನ್ನು ವಿತರಿಸಲಾಗುತ್ತದೆ. ಕನ್ನಡಿಗರ ಪ್ರತಿನಿಧಿಯಾಗಿ ಹಾಗೂ 'ಭಾರತೀಯ ಸಮುದಾಯ ಹಿತನಿಧಿ (ಐ.ಸಿ.ಬಿ.ಎಫ್)' ಸಂಘದ ಜಂಟಿ-ಕಾರ್ಯದರ್ಶಿಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಕ್ರಿಯವಾಗಿ ಸೇವೆ ಸಲ್ಲಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಿದ್ದಾರೆ. ಭಾರತೀಯ ಮೌಲ್ಯಗಳನ್ನು ಹೊರದೇಶದಲ್ಲಿ ಎತ್ತಿ ಹಿಡಿಯುವಲ್ಲಿ ಸುಬ್ರಮಣ್ಯ ಅವರು ಶ್ರಮವಹಿಸಿ, ತಮ್ಮ ಕ್ರಿಯಾಶಿಲತೆಯಿಂದ ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.


from India & World News in Kannada | VK Polls https://ift.tt/33jrsy9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...