ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ತಂಡದ ಇಬ್ಬರು ಆಟಗಾರರನ್ನು ಬಂಧಿಸಿದ್ದಾರೆ. ಬಳ್ಳಾರಿ ಟಸ್ಕರ್ಸ್ ನಾಯಕ ಹಾಗೂ ಅಬ್ರಾರ್ ಖಾಜಿ ಅವರನ್ನು ಸ್ಪಾಟ್ ಫಿಕ್ಸಿಂಗ್ ಸಂಬಂಧ ಬಂಧನಕ್ಕೊಳಪಡಿಸಲಾಗಿದೆ. 2019 ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆಂಬ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ. ಫಿಕ್ಸಿಂಗ್ ಹೇಗೆ? ನಿಧಾನ ಗತಿಯ ಬ್ಯಾಟಿಂಗ್‌ಗಾಗಿ ಆಟಗಾರರು 20 ಲಕ್ಷ ರೂ.ಗಳನ್ನು ಪಡೆದಿದ್ದಾರೆ ಆರೋಪ ಕೇಳಿ ಬಂದಿದೆ. ಇದರ ಜತೆಗೆ ಬೆಂಗಳೂರು ವಿರುದ್ಧದ ಮಗದೊಂದು ಪಂದ್ಯದಲ್ಲೂ ಫಿಕ್ಸಿಂಗ್ ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿಗಳು ಲಭಿಸಿವೆ. ರಣಣಿ ಟ್ರೋಫಿ ಕ್ರಿಕೆಟ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ ಗೌತಮ್, ಹೆಚ್ಚಿನ ಯಶಸ್ಸನ್ನು ಗಳಿಸಿದ್ದರು. ಅಷ್ಟೇ ಯಾಕೆ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಡೇರ್‌ಡೇವಿಲ್ಸ್ ತಂಡವನ್ನು ಪ್ರತಿನಧಿಸಿದ್ದರು. ಇನ್ನೊಂದೆಡೆ ಅಬ್ರಾರ್ ಖಾಜಿ ಕೂಡಾ ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಆಡಿದ್ದಾರೆ. ಪ್ರಸ್ತುತ ವಿಜೋರಾಂ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲೇ ಆಗಸ್ಟ್ 31ರಂದು ಮೈಸೂರಿನಲ್ಲಿ ಬಳ್ಳಾರಿ ಟಸ್ಕರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವೆ ಫೈನಲ್ ಪಂದ್ಯ ಏರ್ಪಟ್ಟಿತ್ತು. ಅಲ್ಲದೆ ಬಳ್ಳಾರಿ ಟೈಗರ್ಸ್ ತಂಡವನ್ನು ಎಂಟು ರನ್ ಅಂತರದಲ್ಲಿ ಮಣಿಸಿದ ವಿನಯ್ ಕುಮಾರ್ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ಟ್ರೋಫಿ ಎತ್ತಿ ಹಿಡಿದಿತ್ತು. ಪಂದ್ಯದಲ್ಲಿ ಬಳ್ಳಾರಿ ಟಸ್ಕರ್ಸ್ ನಾಯಕ ಸಿಎಂ ಗೌತಮ್ 37 ಎಸೆತಗಳಲ್ಲಿ ಎರಡು ಬೌಂಡರಿಗಳಿಂದ 29 ರನ್‌ಗಳನ್ನಷ್ಟೇ ಗಳಿಸಿದ್ದರು. ಸಿಸಿಸಿ ಪೊಲೀಸರು ಈಗಾಗಲೇ ಫಿಕ್ಸಿಂಗ್ ಸಂಬಂಧ ಹಲವು ಆಟಗಾರರು ಹಾಗೂ ಫ್ರಾಂಚೈಸಿ ಮಾಲಿಕರನ್ನು ಬಂಧಿಸಿದ್ದಾರೆ. ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲಿಕ ಅಶ್ಫಾಕ್ ಅಲಿ ತಾರ್, ಬಳ್ಳಾರಿ ಟಸ್ಕರ್ಸ್ ತಂಡದ ಡ್ರಮ್ಮರ್ ಭವೇಶ್, ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ಕೋಚ್ ವಿನು ಪ್ರಸಾದ್ ಹಾಗೂ ಬ್ಯಾಟ್ಸ್‌ಮನ್ ವಿಶ್ವನಾಥನ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2oTttlF